ಬೆಳಗಾವಿ: ಜಿಲ್ಲಾಧಿಕಾರಿ ಮನೆ ಮುಂದೆ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ

ಜಾಧವ ನಗರದಲ್ಲಿರುವ ಜಿಲ್ಲಾಧಿಕಾರಿ ನಿವಾಸದ ಪ್ರವೇಶ ದ್ವಾರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದ ಗಾರ್ಡ್ (ಪೊಲೀಸ್ ಕಾನ್‌ಸ್ಟೆಬಲ್) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ:  ಜಾಧವ ನಗರದಲ್ಲಿರುವ ಜಿಲ್ಲಾಧಿಕಾರಿ ನಿವಾಸದ ಪ್ರವೇಶ ದ್ವಾರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದ ಗಾರ್ಡ್ (ಪೊಲೀಸ್ ಕಾನ್‌ಸ್ಟೆಬಲ್) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕಾಶ ಗುರುವಣ್ಣನವರ (35) ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿಯವರು. ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿಗೆಂದು ನಿರ್ಮಿಸಿರುವ ಜಾಗದಲ್ಲಿ ಕುತ್ತಿಗೆಗೆ ಶೂಟ್ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ನಿವಾಸಕ್ಕೆ ರಾತ್ರಿ ವೇಳೆ ನಿಯಮಿತವಾಗಿ ಗಾರ್ಡ್ ನಿಯೋಜಿಸಿರುತ್ತೇವೆ. ಪ್ರಕಾಶ್ ಅವರನ್ನು ಒಂದು ವಾರದಿಂದ ಜಿಲ್ಲಾಧಿಕಾರಿ ನಿವಾಸದ ಭದ್ರತೆಯ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇಲಾಖೆಯಿಂದ ಕೊಟ್ಟಿದ್ದ ಎಸ್ ಎಲ್ ಆರ್ ಬಂದೂಕಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

'ಬೆಂಗಳೂರಿನಲ್ಲಿ ನೇಮಕವಾಗಿದ್ದ ಅವರು ನಂತರ ಇಲ್ಲಿನ ಸಿಎಆರ್ ಗೆ ವರ್ಗಾವಣೆ ಆಗಿ ಬಂದಿದ್ದಾರೆ. ನಮಗೆ ಬಂದಿರುವ ಮಾಹಿತಿ ಪ್ರಕಾರ ಅವರು ಎರಡು ವರ್ಷಗಳಿಂದ ಮನೋವ್ಯಾದಿಯಿಂದ ಬಳಲುತ್ತಿದ್ದರು, ಔಷಧಿ ಪಡೆಯುತ್ತಿದ್ದರು ಎಂಬ ವಿಷಯವನ್ನು ಅವರ ಸಹೋದರ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com