ವೇತನ ನೀಡುವಂತೆ ಮುಖ್ಯಮಂತ್ರಿಗಳಿಗೆ ಕೆಎಸ್ ಆರ್ ಟಿಸಿ ನೌಕರರ ಮನವಿ

ಕರ್ನಾಟಕ ರಾಜ್ಯ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟವು ತನ್ನ ಉದ್ಯೋಗಿಗಳಿಗೆ ಸಂಬಳ ನೀಡುವಂತೆ ಕೋರಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟವು ತನ್ನ ಉದ್ಯೋಗಿಗಳಿಗೆ ಸಂಬಳ ನೀಡುವಂತೆ ಕೋರಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.

ಮಾರ್ಚ್ 3 ರಿಂದ ಮೇ 4ರ ವರೆಗೆ 469 ಕೋಟಿ ರು. ನಷ್ಟವಾಗಿದ್ದು, ಈ ಸಂಬಂಧ ಸಿಎಂ ಜೊತೆ ಸಭೆ ನಡೆಸಿದ್ದರು. ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಕೇವಲ 160 ಕೋಟಿ ರೂ. ಮಾತ್ರ ನೀಡಿದ್ದು, ಅದು ಆ ಹಣ ಸಾಕಾಗುವುದಿಲ್ಲ ಎಂದು ಹೇಳಿದೆ.

ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ವೇತನ ನೀಡಲು 330 ಕೋಟಿ ರು ಅವಶ್ಯಕತೆಯಿದೆ ಎಂದು ಎಐಟಿಯುಸಿ ಮುಖ್ಯ ಕಾರ್ಯದರ್ಶಿ ಡಿ ಎ ವಿಜಯ ಭಾಸ್ಕರ್ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರೊಂದಿಗೆ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಏಪ್ರಿಲ್ ವೇತನವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಹೇಳಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com