ಕುಂದಾಪುರ: 30 ಅಡಿ ಆಳದ ಬಾವಿಗೆ ಬಿದ್ದಿದ್ದ ಜಿಂಕೆಯ ರಕ್ಷಣೆ

ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಸೋಡು ಗ್ರಾಮದಲ್ಲಿ ಬಾವಿಯಲ್ಲಿ ಬಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ. 
ಜಿಂಕೆ
ಜಿಂಕೆ

ಉಡುಪಿ: ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಸೋಡು ಗ್ರಾಮದಲ್ಲಿ ಬಾವಿಯಲ್ಲಿ ಬಿದ್ದ ಜಿಂಕೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ.

ಜಿಂಕೆಯು ಆಕಸ್ಮಿಕವಾಗಿ ಮುಂಜಾನೆ 30 ಅಡಿ ಆಳದ ಬಾವಿಗೆ ಬಿದ್ದಿತ್ತು. ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡುತ್ತಿದ್ದಂತೆಯೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು.

ಸ್ಥಳೀಯ ವ್ಯಕ್ತಿಯೊಬ್ಬರು ಬಾವಿಗೆ ಇಳಿದು ಜಿಂಕೆಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ನಂತರ ಅದನ್ನು ಹೊರತೆಗೆಯಲಾಯಿತು.

ಸಂಪೂರ್ಣ ರಕ್ಷಣಾ ಕಾರ್ಯಾಚರಣೆ ಸುಮಾರು 20 ನಿಮಿಷಗಳ ಕಾಲ ನಡೆಯಿತು ಎಂದು ವಲಯಾರಣ್ಯಾಧಿಕಾರಿ (ಆರ್‌ಎಫ್‌ಒ) ಪ್ರಭಾಕರ್ ಕುಲಾಲ್ ತಿಳಿಸಿದ್ದಾರೆ.

“ಮೂರು ವರ್ಷದ ಗಂಡು ಜಿಂಕೆಗೆ ಯಾವುದೇ ಗಾಯಗಳಾಗಿಲ್ಲ. ಹೊರತೆಗೆದ ನಂತರ, ಅದರ ಮೇಲೆ ನೀರನ್ನು ಸಿಂಪಡಿಸಲಾಯಿತು. ಜಿಂಕೆ ಕೂಡಲೇ ಎದ್ದು ಹತ್ತಿರದ ಕಾಡಿಗೆ ಓಡಿಹೋಯಿತು, ”ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com