ಬೆಂಗಳೂರು: ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಸೋಂಕು; ನರ್ಸಿಂಗ್ ಹೋಂ ಸೀಲ್ ಡೌನ್

ಯಶವಂತಪುರ ಸಮೀಪದ ಮಂಗಳ ನರ್ಸಿಂಗ್‌ ಹೋಮ್‌ನಲ್ಲಿ ಚಿಕನ್ ಗುನ್ಯಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಕೊಲ್ಕತ್ತಾದ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ, ನರ್ಸಿಂಗ್‌ ಹೋಮ್‌ ಅನ್ನು ಸೀಲ್‌ ಡೌನ್‌ ಮಾಡಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಯಶವಂತಪುರ ಸಮೀಪದ ಮಂಗಳ ನರ್ಸಿಂಗ್‌ ಹೋಮ್‌ನಲ್ಲಿ ಚಿಕನ್ ಗುನ್ಯಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಕೊಲ್ಕತ್ತಾದ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ, ನರ್ಸಿಂಗ್‌ ಹೋಮ್‌ ಅನ್ನು ಸೀಲ್‌ ಡೌನ್‌ ಮಾಡಲಾಗಿದೆ. 

ಮಹಿಳೆಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಹೈದರಾಬಾದ್‌ಗೆ ಕಳುಹಿಸಲಾಗಿದೆ. ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇವರು ಮೇ 1ರಿಂದ ಮೇ 5ರವರೆಗೆ ಚಿಕಿತ್ಸೆ ಪಡೆದುಕೊಂಡಿದ್ದರು. 

ನರ್ಸಿಂಗ್‌ ಹೋಮ್‌ನ ವೈದ್ಯರು, ಸಿಬ್ಬಂದಿ ಹಾಗೂ ಕುಟುಂಬದ ಸದಸ್ಯರು ಸೇರಿದಂತೆ 13 ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಎರಡು ತಿಂಗಳ ಹಿಂದೆ ಮಹಿಳೆ ಬೆಂಗಳೂರಿಗೆ ಆಗಮಿಸಿದ್ದರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com