ಅನ್ಯ ಕಾಯಿಲೆಗಳಿಗೆ ಖಾಸಗಿ ವೈದ್ಯರು ಚಿಕಿತ್ಸೆ ನೀಡದಿದ್ದರೆ ನೋಂದಣಿ ರದ್ದು: ಶ್ರೀರಾಮುಲು

ಕೊವಿಡ್-19 ಸೋಂಕಿತರ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ಸರ್ಕಾರಿ ಆಸ್ಪತೆಗಳ ವೈದ್ಯರು ಮತ್ತು ಸಿಬ್ಬಂದಿ ಹಗಲಿರಳು ಶ್ರಮಿಸುತ್ತಿದ್ದು, ಖಾಸಗಿ ಆಸ್ಪತ್ರೆಗಳ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡದಿದ್ದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಎಚ್ಚರಿಕೆ ನೀಡಿದ್ದಾರೆ.
ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು

ಧಾರವಾಡ: ಕೊವಿಡ್-19 ಸೋಂಕಿತರ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ಸರ್ಕಾರಿ ಆಸ್ಪತೆಗಳ ವೈದ್ಯರು ಮತ್ತು ಸಿಬ್ಬಂದಿ ಹಗಲಿರಳು ಶ್ರಮಿಸುತ್ತಿದ್ದು, ಖಾಸಗಿ ಆಸ್ಪತ್ರೆಗಳ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡದಿದ್ದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಎಚ್ಚರಿಕೆ ನೀಡಿದ್ದಾರೆ.

ವೈದ್ಯರು ತಮ್ಮ ವೃತ್ತಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳಬಾರದು. ಕೆಪಿಎಂಇ ಕಾಯ್ದೆ ಅಡಿ ನೋಂದಣಿಯಾಗಿರುವ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಕೊರೋನಾ ಅಲ್ಲದ ಇತರೆ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದಾರೆ.

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮತನಾಡಿದ ಸಚಿವರು, ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಜನರ ಸಾಮಾನ್ಯ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಇದರಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದರು.

ಖಾಸಗಿ ವೈದ್ಯರು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಮತ್ತು ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಶೀಘ್ರದಲ್ಲೇ ಸಭೆ ನಡೆಸಿ ಚಿಕಿತ್ಸೆ ನೀಡದ ಖಾಸಗಿ ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com