ನಂಜನಗೂಡಿನ ಔಷಧಿ ಕಾರ್ಖಾನೆ ಸಿಬ್ಬಂದಿಗೆ ಸೋಂಕು: ಕಾರಣ ಬಹಿರಂಗ ಪಡಿಸಿದ ಸೋಮಶೇಖರ್

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮೈಸೂರನ್ನು ಕೆಂಪು ವಲಯದಿಂದ ಕಿತ್ತಳೆ ವಲಯಕ್ಕೆ ಬದಲಾಯಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ ಸಚಿವ ಸೋಮಶೇಖರ್ ಹೇಳಿದ್ದಾರೆ.
ಸೋಮಶೇಖರ್
ಸೋಮಶೇಖರ್

ಮೈಸೂರು: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮೈಸೂರನ್ನು ಕೆಂಪು ವಲಯದಿಂದ ಕಿತ್ತಳೆ ವಲಯಕ್ಕೆ ಬದಲಾಯಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ ಸಚಿವ ಸೋಮಶೇಖರ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಕ್ವಾರೆಂಟೈನ್ ಸಂಖ್ಯೆಯೂ ಸಂಪೂರ್ಣ ಇಳಿದಿದೆ ಎಂದು ಹೇಳಿದ್ದಾರೆ. 90 ಪಾಸಿಟಿವ್ ಪ್ರಕರಣದಿಂದ ಈಗ 7 ಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ರೈತರಿಗೆ ಓಡಾಟಕ್ಕೆ ಅನುಕೂಲವಾಗಲಿ ಎಂದು ಗಡಿಭಾಗವನ್ನು ಓಡಾಟಕ್ಕೆ ಸ್ವಲ್ಪ ಸಡಿಲಗೊಳಿಸಲಾಗಿದೆ. ರೈತರು ಬೆಳೆದ ಬೆಳೆ ಮಾರಾಟಕ್ಕೆ ತೊಂದರೆಯಾಗುತ್ತಿದ.

"ಬೆಂಗಳೂರಿನಲ್ಲಿ ತಬ್ಲಿಘಿಗಳ ಸಭೆ ನಡೆದಿತ್ತು. ಆ ಸಭೆಗೆ ಜುಬಿಲಿಯಂಟ್ ಕಾರ್ಖಾನೆಯ ಕಾರ್ಮಿಕ ಹೋಗಿ ಬಂದಿದ್ದ ಎಂಬುದು ಮೊದಲ ಕಾರಣವೆಂದು ಗುರುತಿಸಲಾಗಿದೆ" ಎಂದು   ಮಾಹಿತಿ ನೀಡಿದರು..
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com