ಗೋವಾದಲ್ಲಿರುವ ಕರ್ನಾಟಕದ ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ತಲುಪಲು ವ್ಯವಸ್ಥೆ

ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 45 ದಿನಳಿಂದ ಗೋವಾದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಕರೆದು ತರಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ.
ಬೆಳಗಾವಿ ಗಡಿಯಲ್ಲಿ ವಲಸೆ ಕಾರ್ಮಿಕರು
ಬೆಳಗಾವಿ ಗಡಿಯಲ್ಲಿ ವಲಸೆ ಕಾರ್ಮಿಕರು

ಬೆಳಗಾವಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 45 ದಿನಳಿಂದ ಗೋವಾದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಕರೆದು ತರಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ.

ಗೋವಾದಲ್ಲಿವಿವಿಧ ಉದ್ಯೋಗ ಮಾಡುತ್ತಿರುವ ಕರ್ನಾಟಕದ ಸುಮಾರು 10 ಸಾವಿರ ಜನ ವಾಪಸ್‌ ತಮ್ಮ ಊರಿಗೆ ತೆರಳುತ್ತಿದ್ದಾರೆ. ಕಾರವಾರದ ಮೂಲಕವೇ ಈ ಎಲ್ಲಕಾರ್ಮಿಕರು ರಾಜ್ಯ ಪ್ರವೇಶಿಸಬೇಕಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಗೋವಾ ಗಡಿಯ ಚೆಕ್‌ಪೋಸ್ಟ್‌ನಲ್ಲಿವ್ಯವಸ್ಥೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಎಲ್ಲ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ದಾಖಲೆಗಳ ವಿವರ ಪಡೆಯಲಾಯಿತು. 

ಉತ್ತರ ಕನ್ನಡ ಹೊರತುಪಡಿಸಿ ಬೇರೆ ಜಿಲ್ಲೆಗಳ ಕಾರ್ಮಿಕರಿಗೆ ಆಯಾ ಜಿಲ್ಲಾಡಳಿತದ ಸಹಕಾರದೊಂದಿಗೆ ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಣಿ ಮಾಡಿಸಿ ಅವರವರ ಜಿಲ್ಲೆಗೆ ಕಳುಹಿಸಿಕೊಡಲಾಯಿತು, ಸುಮಾರು 20 ಸಾವಿರ ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಲು ಗೋವಾ ಸರ್ಕಾರಕ್ಕೆ ಅರ್ಜಿ ನೋಂದಾಯಿಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com