ಹೊರ ರಾಜ್ಯದ ಕನ್ನಡಿಗರನ್ನೂ ತಾಯ್ನಾಡಿಗೆ ಕರೆಯಿಸಿಕೊಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಹೊರದೇಶ, ಹೊರರಾಜ್ಯದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮರಳಿ ಕರ್ನಾಟಕಕ್ಕೆ ಬರಲು ಲಕ್ಷಾಂತರ ಮಂದಿ ಮನವಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸದೇ ಇರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಹೊರದೇಶ, ಹೊರರಾಜ್ಯದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮರಳಿ ಕರ್ನಾಟಕಕ್ಕೆ ಬರಲು ಲಕ್ಷಾಂತರ ಮಂದಿ ಮನವಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸದೇ ಇರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಹೊರ ರಾಜ್ಯದ ಕನ್ನಡಿಗರ ಆರ್ತನಾದ ಸಂಪುಟದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳುತ್ತಿಲ್ಲ. ಹೊರನಾಡ ಕನ್ನಡಿಗರನ್ನು ಆದಷ್ಟು ಬೇಗ ತಾಯ್ನಾಡಿಗೆ ಕರೆಯಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಈಗಾಗಲೇ ವಿಮಾನದ ಮೂಲಕ ಹೊರರಾಷ್ಟ್ರದ ಕನ್ನಡಿಗರನ್ನು ಕರೆಸಿಕೊಳ್ಳಲು ಸರ್ಕಾರ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ. ಕೊರೋನಾ ನಿಯಂತ್ರಣ ಹಾಗೂ ಸಂಬಂಧಪಟ್ಟ ಕೆಲಸಗಳಿಗೆ ಸರ್ಕಾರಕ್ಕೆ ಸಹಕರಿಸಲು ಪ್ರತಿಪಕ್ಷ ಕಾಂಗ್ರೆಸ್ ಸಿದ್ಧವಿದೆ. ಅದರಂತೆ ಹೊರರಾಜ್ಯದ ಕನ್ನಡಿಗರನ್ನೂ ಕರೆಯಿಸಿಕೊಳ್ಳಬೇಕೆಂದು ಶಿವಕುಮಾರ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com