ಮಲೇಷಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು: ನೆರವಿಗೆ ಧಾವಿಸಿದ ಕೇಂದ್ರ ಸಚಿವ ಸದಾನಂದಗೌಡ

ತವರಿಗೆ ಮರಳಲು ಸಾಧ್ಯವಾಗದೆ ವಿದೇಶಗಳಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ನೆರವಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಮುಂದಾಗಿದ್ದಾರೆ.
ಸದಾನಂದ ಗೌಡ
ಸದಾನಂದ ಗೌಡ

ಬೆಂಗಳೂರು: ತವರಿಗೆ ಮರಳಲು ಸಾಧ್ಯವಾಗದೆ ವಿದೇಶಗಳಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ನೆರವಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಮುಂದಾಗಿದ್ದಾರೆ. 

ಈ ಹಿಂದೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಕನ್ನಡಿಗರು ಸಂಕಷ್ಟದಲ್ಲಿರುವ ಕುರಿತು ಸದಾನಂದ ಗೌಡ ಅವರ ಗಮನಕ್ಕೆ ತಂದಿತ್ತು. 

ಮಾಹಿತಿ ತಿಳಿದ ಕೂಡಲೇ ನೆರವಿಗೆ ಧಾವಿಸಿದ ಸದಾನಂದ ಗೌಡ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದು, ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. 

ಇದೀಗ ಬ್ರಿಟನ್, ಫಿಲಿಪೈನ್ಸ್ ರಾಷ್ಟ್ರಗಳ ವಿಮಾನಗಳು ಬೆಂಗಳೂರಿನಲ್ಲಿ ಬಂದಿಳಿಯಲು ಅನುಮತಿ ನೀಡಲಾಗಿದೆ. ದುಬೈ, ಕತಾರ್ ಸೇರಿದಂತೆ ಇತರೆ ರಾಷ್ಟ್ರಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇದೀಗ ವಿದೇಶಾಂಗ ಸಚಿವಾಲಯ ವಿಮಾನಗಳ ಮೂಲಕ ಕನ್ನಡಿಗರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಕರೆತರಲಿದೆ ಎಂದು ಹೇಳಲಾಗುತ್ತಿದೆ. 

ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ಕುರಿತು ನೀವು ನನ್ನ ಗಮನಕ್ಕೆ ಬಂದಿದ್ದು, ಈ ಕುರಿತು ಶೀಘ್ರಗತಿಯಲ್ಲಿ ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಿದ್ದೇನೆಂದು ಸದಾನಂದ ಗೌಡ ಹೇಳಿದ್ದಾರೆ. 

ಈಗಾಗಲೇ ಕರ್ನಾಟಕ ಸರ್ಕಾರಕ್ಕೂ ಪತ್ರ ಬರೆದಿದ್ದೇನೆ. ಮಲೇಷಿಯಾದಲ್ಲಿರುವ ಕನ್ನಡಿಗರ ರಕ್ಷಣೆಗೆ ವಿಶೇಷ ವಿಮಾನ ನಿಯೋಜಿಸಿ ಇಲ್ಲವೇ, ಇತರೆ ರಾಜ್ಯಗಳ ಅಧಿಕಾರಿಗಳಿಗೆ ಮನವಿ ಮಾಡಿಕೊಂಡು ಕನ್ನಡಿಗರನ್ನು ತಮ್ಮ ವಿಮಾನ ನಿಲ್ದಾಣಗಳಲ್ಲಿ ಇಳಿಸಿ, ರಾಜ್ಯಕ್ಕೆ ಕರೆತರಲು ಸಹಾಯ ಮಾಡುವಂತೆ ಮನವಿ ಮಾಡಿಕೊಳ್ಳುವಂತೆ ತಿಳಿಸಿದ್ದೇನೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com