ಮಗು ಚಿರತೆಗೆ ಬಲಿ; ಸಂತ್ರಸ್ತ ಕುಟುಂಬ ಭೇಟಿಯಾಗಿ 7.5 ಲಕ್ಷ ರೂ. ಪರಿಹಾರ ನೀಡಿದ ಆನಂದ್ ಸಿಂಗ್

ಚಿರತೆಗೆ ಬಲಿಯಾದ ಮೂರು ವರ್ಷದ ಮಗುವಿನ ಕುಟುಂಬಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಅವರು 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಶನಿವಾರ ಘಟನಾ ಸ್ಥಳಕ್ಕೆ ಭೇಟಿ‌ ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಆನಂದ್ ಸಿಂಗ್
ಆನಂದ್ ಸಿಂಗ್

ರಾಮನಗರ: ಚಿರತೆಗೆ ಬಲಿಯಾದ ಮೂರು ವರ್ಷದ ಮಗುವಿನ ಕುಟುಂಬಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಅವರು 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಶನಿವಾರ ಘಟನಾ ಸ್ಥಳಕ್ಕೆ ಭೇಟಿ‌ ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು, ಮನೆಯಲ್ಲಿ ಮಲಗಿದ್ದ ಮೂರು ವರ್ಷದ ಮಗುವನ್ನು ಚಿರತೆ ಎಳೆದೊಯ್ದು ಕೊಂದುಹಾಕಿದ ಹಿನ್ನೆಲೆಯಲ್ಲಿ ಬೇಜವಾಬ್ದಾರಿ‌ತನ ತೋರಿದ ಅರಣ್ಯ ಇಲಾಖೆ ಸಿಬ್ಬಂದಿ‌‌‌‌ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಂತಹ ‌ಘಟನೆ‌ ಜರುಗಬಾರದಿತ್ತು. ಇದು ಅತ್ಯಂತ ದುಃಖದ ಸಂಗತಿ ಎಂದರು. ಲಾಕ್​ಡೌನ್​​ ಹಿನ್ನೆಲೆಯಲ್ಲಿ ಜನ ಸಂಚಾರ ಕಡಿಮೆಯಾಗಿದ್ದರಿಂದ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿವೆ. ನಾಳೆಯೇ ಕ್ಯೂಬಿಂಗ್ ಕೆಲಸ ಆರಂಭಿಸಿ ಚಿರತೆ ಸೆರೆ ಹಿಡಿಯಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ್, ಮಾಗಡಿ ಶಾಸಕ ಎ.ಮಂಜುನಾಥ್ ಉಪಸ್ಥಿತರಿದ್ದರು. ಮನೆಯಲ್ಲಿ ಮಲಗಿದ್ದ 3 ವರ್ಷದ ಗಂಡು ಮಗುವನ್ನು ಚಿರತೆಯೊಂದು ಹೊತ್ತೊಯ್ದು ಕೊಂದು ತಿಂದಿರುವ ಘಟನೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಚಂದ್ರಣ್ಣ ಹಾಗೂ ಮಂಗಳ ಗೌರಮ್ಮ ದಂಪತಿಯ ಮಗನಾದ ಹೇಮಂತ್ ಚಿರತೆ ದಾಳಿಗೆ ಬಲಿಯಾಗಿದ್ದನು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com