ಬೆಂಗಳೂರು: ವಾಣಿ ವಿಲಾಸ್ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಯಿಂದ ಪ್ರತಿಭಟನೆ

ಆಡಳಿತ ಮಂಡಳಿ ತಮಗೆ ಅಗತ್ಯ ಸೌಕರ್ಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಶನಿವಾರ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಆಡಳಿತ ಮಂಡಳಿ ತಮಗೆ ಅಗತ್ಯ ಸೌಕರ್ಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಶನಿವಾರ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಾಸ್ಕ್ ಮತ್ತು ಪಿಪಿಇ ಕಿಟ್‌ಗಳೂ ಸೇರಿ ಇನ್ನಿತರ ಅಗತ್ಯ ಸೌಲಭ್ಯ ಒ‌ದಗಿಸುತ್ತಿಲ್ಲ ಎಂದು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ದೂರಿದ್ದಾರೆ. ಇನ್ನು, ನಗರದ ಪಾದರಾಯನಪುರದಲ್ಲಿ ಕೊರೊನಾ ಸೋಂಕು‌ ಅಧಿಕವಾಗಿದ್ದು, ಅಲ್ಲಿಯ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ‌  ಆಕೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ಓಡಾಡಿದ್ದು, ಹೀಗಾಗಿ ವೈದ್ಯಕೀಯ ಸಿಬ್ಬಂದಿ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಆಡಳಿತ ಮಂಡಳಿ ತಮಗೆ ಮಾಸ್ಕ್‌ ಮತ್ತು ಪಿಪಿಇ ಕಿಟ್‌ಗಳಂಥ ಕನಿಷ್ಠ ಸೌಲಭ್ಯಗಳನ್ನು ಒದಗಿಸಿಲ್ಲ. ಇಂತಹ ತುರ್ತು ಪರಿಸ್ಥಿತಿಯಲ್ಲಿ ಕೆಲಸ ಮಾಡುವುದಾದರೂ ಹೇಗೆ ಎಂದು ಪ್ರತಿಭಟನಕಾರರು ಪ್ರಶ್ನಿಸುತ್ತಿದ್ದಾರೆ. ವೈದ್ಯಕೀಯ ಸಿಬ್ಬಂದಿ, ಪಿಜಿ ವಿದ್ಯಾರ್ಥಿಗಳು, ಆಡಳಿತ ಮಂಡಳಿ ವಿರುದ್ಧ  ಪ್ರತಿಭಟನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com