ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ: ಡಿ.ವಿ. ಸದಾನಂದ ಗೌಡ

ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ
ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ

ಬೆಂಗಳೂರು: ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಫ್ಲೈಟ್‌ ನಂ-ಐಎಕ್ಸ್‌ 0384 ವಿಮಾನ ದುಬೈಯಿಂದ 16.10ಕ್ಕೆ ಹೊರಟು ಮಂಗಳೂರಿಗೆ 21.10ಕ್ಕೆ ತಲುಪಲಿದೆ ಎಂದಿದ್ದಾರೆ. 

ಲಾಕ್‌ ಡೌನ್‌ನಿಂದಾಗಿ ವಿದೇಶದಲ್ಲಿ ಉಳಿದಿರುವ ಭಾರತೀಯರನ್ನು ಭಾರತಕ್ಕೆ ಕರೆ ತರಲು ಏರ್ ಇಂಡಿಯಾ ವಿಮಾನವು ಮೇ 14 ರಂದು ಸಂಜೆ 4:10 ದುಬೈಯಿಂದ ಹೊರಡಲಿದ್ದು, ಮಂಗಳೂರಿಗೆ ರಾತ್ರಿ 9:10 ಕ್ಕೆ ಆಗಮಿಸಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು.

 ಆದರೆ ಇದೀಗ ಎರಡು ದಿನ ಮೊದಲು ಈ ವಿಮಾನ ಹೊರಡಲಿದೆ. ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು, ಹಿರಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ. ವಿಮಾನದಲ್ಲಿ ಆಗಮಿಸಲಿರುವ ಪ್ರಯಾಣಿಕರಲ್ಲಿ ಮಂಗಳೂರಿನವರಿಗೆ ಮಂಗಳೂರಿನಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು. ಉಳಿದಂತೆ ಉಡುಪಿ ಜಿಲ್ಲೆಯ ಹಾಗು ಕೇರಳ ಭಾಗದ ಜನರಿಗೆ ಅವರ ಭಾಗದಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com