ಹೊರ ರಾಜ್ಯಗಳಲ್ಲಿರುವ ಕನ್ನಡಿಗರು ತವರಿಗೆ ಮರಳಲು ತಗಲುವ ರೈಲು ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಡಿಕೆಶಿ

ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರು  ರಾಜ್ಯಕ್ಕೆ ಬರಲು ರೈಲು ಪ್ರಯಾಣದ ಸಂಪೂರ್ಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 
ಕೆಪಿಸಿಸಿ ಸಭೆ
ಕೆಪಿಸಿಸಿ ಸಭೆ

ಬೆಂಗಳೂರು: ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರು  ರಾಜ್ಯಕ್ಕೆ ಬರಲು ರೈಲು ಪ್ರಯಾಣದ ಸಂಪೂರ್ಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಹಿರಿಯ ಮುಖಂಡರ ಸಭೆ ಕರೆದಿದ್ದರು. ಕೊರೊನಾ ಸೋಂಕು ಹರಡುವಿಕೆಯ ಸಂದರ್ಭದಲ್ಲಿ ಕಾಂಗ್ರೆಸ್ ನಡೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು, ಪ್ರಸ್ತುತ ಕೊರೊನಾ ಸ್ಥಿತಿ, ಜನರ ಸಂಕಷ್ಟ, ಅದರ ನಿವಾರಣೆಗೆ ಪಕ್ಷದ ನಿಲುವು, ಪಕ್ಷದ ಸಂಘಟನೆ, ಬಲವರ್ಧನೆ ಯೋಜನೆಗಳು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಇದೇ ವೇಳೆ ಪರ ಊರಿನಲ್ಲಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ತಗಲುವ ವೆಚ್ಚವನ್ನು ಕಾಂಗ್ರೆಸ್ ಪಕ್ಷವೇ ಭರಿಸಲು ನಿರ್ಧಾರ ಕೈಗೊಳ್ಳಲಾಯಿತು. ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಸೋನಿಯಾ ಗಾಂಧಿ ಹಣ ನೀಡುವುದಾಗಿ ತಿಳಿಸಿದ್ದರು, ಅದರಂತೆ ನಾವು ಕೂಡ ಕೆಪಿಸಿಸಿ ವತಿಯಿಂದ ಹಣ ನೀಡುವುದಾಗಿ ತಿಳಿಸಿದ್ದಾರೆ.

ಹೊರ ರಾಜ್ಯದಲ್ಲಿರುವ "ನಮ್ಮವರು" ಮರಳಿ ರಾಜ್ಯಕ್ಕೆ ಬರಲು, ರೈಲು ಟಿಕೆಟ್ ದರ ಭರಿಸುತ್ತೇವೆ , ಮಧ್ಯಪ್ರದೇಶ, ತ್ರಿಪುರ, ಹಿಮಾಚಲ ಪ್ರದೇಶ, ಜಮ್ಮುಕಾಶ್ಮೀರ ರಾಜ್ಯಗಳಲ್ಲಿ ಇರುವ ಕನ್ನಡಿಗರು ಸೇರಿದಂತೆ ಬೇರೆ ರಾಜ್ಯದಲ್ಲಿ ಸಿಲುಕಿರುವ ಕನ್ನಡಿಗರು ಬರಲು ಕೆಪಿಸಿಸಿ ವತಿಯಿಂದ ಟಿಕೆಟ್ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com