ಪ್ರಧಾನಿ ಮೋದಿ ಜೊತೆಗೆ ಮಾತನಾಡುತ್ತಿರುವ ಸಿಎಂ ಯಡಿಯೂರಪ್ಪ
ಪ್ರಧಾನಿ ಮೋದಿ ಜೊತೆಗೆ ಮಾತನಾಡುತ್ತಿರುವ ಸಿಎಂ ಯಡಿಯೂರಪ್ಪ

ಕಂಟೈನ್ಮೆಂಟ್ ಬಿಟ್ಟು ಉಳಿದ ಸ್ಥಳಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಮನವಿ

ಜಿಲ್ಲಾವಾರು ಕೆಂಪು, ಕಿತ್ತಳೆ ಹಾಗೂ ಹಸಿರು ವಲಯಗಳನ್ನು ಗುರುತಿಸಬಾರದು, ಕಂಟೈನ್ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಕ್ಲಸ್ಟರುಗಳ ಸುತ್ತಲಿನ 50ರಿಂದ 100 ಮೀಟರ್ ವರೆಗಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು: ಜಿಲ್ಲಾವಾರು ಕೆಂಪು, ಕಿತ್ತಳೆ ಹಾಗೂ ಹಸಿರು ವಲಯಗಳನ್ನು ಗುರುತಿಸಬಾರದು, ಕಂಟೈನ್ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಕ್ಲಸ್ಟರುಗಳ ಸುತ್ತಲಿನ 50ರಿಂದ 100 ಮೀಟರ್ ವರೆಗಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಪ್ರಧಾನಿ ಮೋದಿಯವರು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸೋಮವಾರ ಸಂವಾದ ನಡೆಸಿದ್ದು, ಈ ವೇಳೆ, ಪ್ರಧಾನಮಂತ್ರಿಗಳೊಂದಿಗೆ ಮಾತನಾಡಿರುವ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕೈಗೊಂಡಿರುವ 4ಟಿ ಸೂತ್ರ ಸೇರಿದಂತೆ ಹಲವು ಕ್ರಮಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಅಲ್ಲದೆ, ಪ್ರಧಾನಿಗೆ ಕೆಲವು ಸಲಹೆಗಳನ್ನೂ ನೀಡಿದ್ದಾರೆ. 

ಮೇ ಅಂತ್ಯದವರೆಗೆ ದೇಶದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿಮಾನಯಾನ ಪ್ರಾರಂಭಿಸಬಾರದು. ಅಂತರಾಷ್ಟ್ರೀಯ ಪ್ರಯಾಣಿಕರನ್ನು ಕಡ್ಡಾಯವಾಗಿ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೊಳಪಡಿಸಬೇಕು. ಹೊರ ರಾಜ್ಯ ಪ್ರಯಾಣಿಕರನ್ನು ಸಹ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮತ್ತು ಪರೀಕ್ಷೆಗೊಳಪಡಿಸಬೇಕು. ಹೊರ ರಾಜ್ಯದವರು ತಾವು ಹೊರಡುವ ಸ್ಥಳದಲ್ಲಿ ಆರೋಗ್ಯ ಪ್ರಮಾಣ ಪತ್ರವನ್ನು ಸ್ಥಳೀಯ ಆರೋಗ್ಯಾಧಿಕಾರಿಗಳಿಂದ ಪಡೆದುಕೊಳ್ಲಬೇಕು. ಹೊಂದಿಲ್ಲದವರನ್ನು ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿ ಇರಿಸಬೇಕೆಂದು ಸಲಹೆ ನೀಡಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com