ಮೈಸೂರು ಹಾಲು ಒಕ್ಕೂಟದಲ್ಲಿ ಅಕ್ರಮ ನೇಮಕಾತಿ, ಮ್ಯಾಚ್ ಫಿಕ್ಸಿಂಗ್: ಸಾ.ರಾ. ಮಹೇಶ್ ಆರೋಪ

ಮೈಸೂರು ಹಾಲು ಒಕ್ಕೂಟದಲ್ಲಿ (ಮೈಮುಲ್ನಲ್ಲಿ) ನಿಯಮ ಗಾಳಿಗೆ ತೂರಿ ಅಕ್ರಮ ನೇಮಕಾತಿ, ಮ್ಯಾಚ್ ಫಿಕ್ಸಿಂಗ್ ನಡೆಯುತ್ತಿದೆ, ಸರ್ಕಾರ ಕೂಡಲೇ ಇದಕ್ಕೆ ತಡೆ ನೀಡಿ, ಸಮಗ್ರ ತನಿಖೆ ನಡೆಸಬೇಕು ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರು ಹಾಲು ಒಕ್ಕೂಟ(ಸಂಗ್ರಹ ಚಿತ್ರ)
ಮೈಸೂರು ಹಾಲು ಒಕ್ಕೂಟ(ಸಂಗ್ರಹ ಚಿತ್ರ)

ಮೈಸೂರು: ಮೈಸೂರು ಹಾಲು ಒಕ್ಕೂಟದಲ್ಲಿ (ಮೈಮುಲ್ನಲ್ಲಿ) ನಿಯಮ ಗಾಳಿಗೆ ತೂರಿ ಅಕ್ರಮ ನೇಮಕಾತಿ, ಮ್ಯಾಚ್ ಫಿಕ್ಸಿಂಗ್ ನಡೆಯುತ್ತಿದೆ, ಸರ್ಕಾರ ಕೂಡಲೇ ಇದಕ್ಕೆ ತಡೆ ನೀಡಿ, ಸಮಗ್ರ ತನಿಖೆ ನಡೆಸಬೇಕು ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸದ್ಯ ಈ ಕೂಡಲೇ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವುದಾಗಿ ಅವರು ಹೇಳಿದರು.

ಇಂದು ಒಕ್ಕೂಟದ ಸಭೆಯಲ್ಲಿ ಅಕ್ರಮವಾಗಿ ನೇಮಕಾತಿಗೆ ಅನುಮತಿ ನೀಡಿ ಹೆಚ್ಚುವರಿ ಹುದ್ದೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.ಪ್ರಸ್ತುತ 168 ಹುದ್ದೆಗಳ ನೇಮಕಾತಿಗೆ ಆದೇಶ ನೀಡಲಾಗಿದೆ ಎಂದು ದೂರಿದ್ದಾರೆ .

ಆದರೆ ಹೆಚ್ಚುವರಿಯಾಗಿ 25 ಹುದ್ದೆಗಳನ್ನು ಇವರೇ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. 18 ಸಾವಿರ ಜನ ಪರೀಕ್ಷೆ ಬರೆದಿದ್ದಾರೆ. ಈ ಪರೀಕ್ಷೆ ನಡೆಸಿದ್ದ ಏಜೆನ್ಸಿ ಮೇಲೂ ಗಂಭೀರ ಆರೋಪ ಇದೆ. ಸರ್ಕಾರ ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com