ಲಕ್ಷಣಗಳಿಲ್ಲದಿದ್ದರೂ ಹೊರಗಿನಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಲಾಕ್ಡೌನ್ ವಿನಾಯಿತಿ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಕ್ಕೆ ಆಗಮಿಸುವ ಎಲ್ಲರನ್ನೂ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ ಮಾಡುವುದಾಗಿ ರಾಜ್ಯ ಸರ್ಕಾರ ಆದೇಶಿಸಿದೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಲಾಕ್ಡೌನ್ ವಿನಾಯಿತಿ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಕ್ಕೆ ಆಗಮಿಸುವ ಎಲ್ಲರನ್ನೂ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ ಮಾಡುವುದಾಗಿ ರಾಜ್ಯ ಸರ್ಕಾರ ಆದೇಶಿಸಿದೆ. 

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರತೀಯೊಬ್ಬರನ್ನೂ ಸಮುದಾಯ ಕೇಂದ್ರಗಳಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗುವುದು ಎಂದು ಹೇಳಿದೆ. 

ಹೊರ ರಾಜ್ಯಗಳಿಂದ ಬರುವ ಜನರಲ್ಲಿ ಲಕ್ಷಣಗಳಿದ್ದರೂ, ಇಲ್ಲದೇ ಹೋದರೂ ಕೂಡ ಕ್ವಾರಂಟೈನ್ ಕಡ್ಡಾಯ . ಗೋವಾದಿಂದ ವ್ಯಕ್ತಿಯೊಬ್ಬರು ರಾಜ್ಯಕ್ಕೆ ಆಗಮಿಸಿದಾಗ ಜಿಲ್ಲಾ ಉಪ ಆಯುಕ್ತರು ಆ ಬಗ್ಗೆ ಪರಿಶೀಲನೆ ನಡೆಸಿ, ಕ್ವಾರಂಟೈನ್ ವ್ಯವಸ್ಥೆಗಳು ಇಲ್ಲದಿದ್ದರೆ, ಅವರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿರುವಂತೆ ನೋಡಿಕೊಳ್ಳಬೇಕು. ಪಾವತಿ ಆಧಾರದ ಮೇಲೆ ಹೋಟೆಲ್ ಗಳಲ್ಲಿ ಕ್ವಾರಂಟೈನ್ ಇರುವವರಿಗೆ ಹೋಟೆಲ್ ಕೊಠಡಿಗಳ ಶುಲ್ಕವನ್ನು ಬಿಬಿಎಂಪಿ ಆಯುಕ್ತರೇ ಶೀಘ್ರದಲ್ಲಿಯೇ ನಿಗದಿ ಮಾಡಲಿದ್ದಾರೆಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com