ಕಾರ್ಮಿಕ ಕಾಯ್ದೆ ತಿದ್ದುಪಡಿ ಮೂಲಕ ಸರ್ಕಾರ ಕಾರ್ಮಿಕರ ಸಮಾಧಿ ಮಾಡಲು ಹೊರಟಿದೆ: ಡಿಕೆ ಶಿವಕುಮಾರ್

ಕಾರ್ಮಿಕ ಕಾಯ್ದೆಯನ್ನು ತಿದ್ದುಪಡಿ ಮಾಡಲು ಹೊರಟಿರುವ ಸರ್ಕಾರ ಕಾರ್ಖಾನೆ ಉದ್ಯಮಿಗಳಿಗೆ ಲಾಭ ಮಾಡಿಕೊಡಲು ಹೊರಟಿದ್ದು, ಕಾರ್ಮಿಕರನ್ನು ಸಮಾಧಿ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಕಾರ್ಮಿಕ ಕಾಯ್ದೆಯನ್ನು ತಿದ್ದುಪಡಿ ಮಾಡಲು ಹೊರಟಿರುವ ಸರ್ಕಾರ ಕಾರ್ಖಾನೆ ಉದ್ಯಮಿಗಳಿಗೆ ಲಾಭ ಮಾಡಿಕೊಡಲು ಹೊರಟಿದ್ದು, ಕಾರ್ಮಿಕರನ್ನು ಸಮಾಧಿ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಡಿ.ಕೆ. ಶಿವಕುಮಾರ್, “ಸರ್ಕಾರ ಎಲ್ಲಾ ವರ್ಗದ ಜನರನ್ನ ಸರಿಸಮನಾಗಿ ನೋಡುವಲ್ಲಿ ವಿಫಲವಾಗಿದೆ. ಮೇಲ್ವರ್ಗದ ಜನರ ಮಾತು ಕೇಳಿಕೊಂಡು ಬಿಜೆಪಿ ನಾಯಕರು ಸಕಾರ ನಡೆಸುತ್ತಿದ್ದಾರೆ. ಕಾರ್ಮಿಕ ಕಾಯ್ದೆಯ ವಿಚಾರದಲ್ಲಿ ಸಾಕಷ್ಟು ತಿದ್ದುಪಡಿ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕಾರ್ಮಿಕ ಕಾಯ್ದೆಯನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಮುಂದಾಗಿದ್ದು , ಈ ಕಾಯ್ದೆಯಲ್ಲಿ ಕಾರ್ಮಿಕರ ವಿರುದ್ಧ ಸಾಕಷ್ಟು ಅಂಶಗಳಿವೆ, ರೈತರ ಮತ್ತು ಕಾರ್ಮಿಕರ ಪರ ಕಾಂಗ್ರೆಸ್‌ ಪಕ್ಷ ನಿಲ್ಲಲಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಕಾರ್ಮಿಕ ಕಾಯ್ದೆಯ ನಿಯಮಾವಳಿಗಳನ್ನೇ ಹಾಳು ಮಾಡಲು ಹೊರಟಿದೆ. ಕೆಲವು ಎಂಎನ್ ಸಿ ಗಳಿಗೆ ಅನುಕೂಲ ಮಾಡಿಕೊಡಲು ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದೆ. ಇದನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣ ವಿರೋಧಿಸುತ್ತಿದ್ದು, ಬೀದಿಗಿಳಿದು ಹೋರಾಟ ಮಾಡಲು ನಿರ್ಧರಿಸಿರುವುದಾಗಿ ಎಚ್ಚರಿಕೆ ನೀಡಿದರು.
ಸರ್ಕಾರದ ಈ ಧೋರಣೆಯಿಂದಾಗಿಯೇ ಐದು ಲಕ್ಷ ಜನ ತಮ್ಮ ರಾಜ್ಯಗಳಿಗೆ ಹೊರಟು ನಿಂತಿದ್ದಾರೆ‌. ಆ ರಿಜಿಸ್ಟ್ರೇಷನ್ ಆಪ್ ಕೂಡ ಬಂದ್ ಆಗಿದೆ. ಕಾರ್ಮಿಕ ಕಾಯಿದೆ ಮತ್ತು ಸಹಕಾರ ಕಾಯ್ದೆಗಳ ತಿದ್ದುಪಡಿ ಮಾಡಲು ಹೊರಟಿದೆ. ಕಾರ್ಮಿಕರಿಗೆ ಅನ್ಯಾಯ ಮಾಡಲು ಹೊರಟಿದೆ. ಅಂತಾರಾಷ್ಟ್ರೀಯ ಕಾರ್ಮಿಕ ಕಾಯ್ದೆಯ ನಿಯಮಾವಳಿಗಳನ್ನೇ ಹಾಳು ಮಾಡಲು ಹೊರಟಿದೆ. ಕೆಲವು ಎಂಎನ್ ಸಿ ಗಳಿಗೆ ಅನುಕೂಲ ಮಾಡಿಕೊಡಲು ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದೆ. ಇದನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣ ವಿರೋಧಿಸುತ್ತದೆ. ಬೀದಿಗಿಳಿದು ಹೋರಾಟ ಮಾಡಲು ನಿರ್ಧರಿಸಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com