ಸಾಮಾಜಿಕ ಅಂತರ ಕಾಯ್ದುಕೊಂಡು ಜುಲೈ 30, 31ಕ್ಕೆ ಸಿಇಟಿ ಪರೀಕ್ಷೆ: ಡಿಸಿಎಂ ಅಶ್ವಥ್ ನಾರಾಯಣ್

ಹಾಲಿ ವರ್ಷದ ಸಿಇಟಿ ಪರೀಕ್ಷೆಗಳು ಮುಂಬರುವ ಜುಲೈ 30, 31ರಂದು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹಾಲಿ ವರ್ಷದ ಸಿಇಟಿ ಪರೀಕ್ಷೆಗಳು ಮುಂಬರುವ ಜುಲೈ 30, 31ರಂದು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಬೆನ್ನಲ್ಲೇ ಸಿಇಟಿ ಪರೀಕ್ಷೆ ಮೇಲೆ ಕರಿ ನೆರಳು ಮೂಡಿತ್ತು, ಈ ಬಗೆಗಿನ ಊಹಾಪೋಹಗಳಿಗೆ ಇಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ತೆರೆ ಎಳೆದಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಹಾಲಿ ವರ್ಷದ ಸಿಇಟಿ ಪರೀಕ್ಷೆಗಳು ಮುಂಬರುವ  ಜುಲೈ 30, 31ರಂದು ನಡೆಯಲಿವೆ ಎಂದು ಹೇಳಿದರು. ಅಲ್ಲದೇ ಆದಷ್ಟು ಬೇಗ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ನಡೆಸುತ್ತೇವೆ.

ಶೀಘ್ರದಲ್ಲೇ ಪಿಯು ಮಂಡಳಿ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ತಿಳಿಸಿದರು. ಇದೇ ವೇಳೆ ಡಿಗ್ರಿ ಕಾಲೇಜುಗಳಿಗೆ ಸೆಪ್ಟೆಂಬರ್‌ನಲ್ಲಿ ಶೈಕ್ಷಣಿಕ ವರ್ಷ  ಆರಂಭಿಸಲು ಚಿಂತನೆ ನಡೆಸಲಾಗಿದೆ. ಮೌಲ್ಯಮಾಪನಕ್ಕೆ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಲಾಗುತ್ತಿದೆ. ವಿವಿ ಪರೀಕ್ಷೆಯಲ್ಲಿ ಮೌಲ್ಯಮಾಪನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಅಂತೆಯೇ ಮೇ ಅಂತ್ಯದೊಳಗೆ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲೇ ಪಠ್ಯ ಚಟುವಟಿಕೆ ಮುಗಿಸಲು ಸೂಚಿಸಲಾಗಿದ್ದು, ಪರೀಕ್ಷೆಗಳಿಗೆ ಈ ಬಾರಿ ಪರೀಕ್ಷಾ ಕೇಂದ್ರಗಳು ಹೆಚ್ಚಾಗಿ ಬೇಕಾಗುತ್ತದೆ‌. ಸಾಮಾಜಿಕ ಅಂತರ  ಕಾಯ್ದುಕೊಂಡು ಪರೀಕ್ಷೆಯನ್ನು ನಡೆಸಲಾಗುವುದು. ಹೀಗಾಗಿ, ಪರೀಕ್ಷಾ ಕೇಂದ್ರಗಳು ಹೆಚ್ಚಾಗಲಿವೆ ಎಂದು ಮಾಹಿತಿ ನೀಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com