ಕೋವಿಡ್ ಸಂಕಷ್ಟಕ್ಕೆ ಮಿಡಿದ ಸಾರಿಗೆ ನೌಕರರು: ಸಿಎಂ ಕೋವಿಡ್ ನಿಧಿಗೆ ದಿನದ ವೇತನ ನೀಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಅಧಿಕಾರಿಗಳು, ನೌಕರರು ತಮ್ಮ ಒಂದು ದಿನದ ವೇತನವನ್ನು ಕೋವಿಡ್ -19 ಪರಿಹಾರ ನಿಧಿಗೆ ನೀಡಿದ್ದಾರೆ. 
ಕೋವಿಡ್ ನಿಧಿಗೆ ದಿನದ ವೇತನ ನೀಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ
ಕೋವಿಡ್ ನಿಧಿಗೆ ದಿನದ ವೇತನ ನೀಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಅಧಿಕಾರಿಗಳು, ನೌಕರರು ತಮ್ಮ ಒಂದು ದಿನದ ವೇತನವನ್ನು ಕೋವಿಡ್ -19 ಪರಿಹಾರ ನಿಧಿಗೆ ನೀಡಿದ್ದಾರೆ.

ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ಇಲಾಖೆ ನೌಕರರ ಪರವಾಗಿ  9 ಕೋಟಿ 85 ಲಕ್ಷದ 9 ಸಾವಿರದ 228  ರು. ಚೆಕ್ ಅನ್ನು ಸಿಎಂ ‘ಕೋವಿಡ್-19 ಪರಿಹಾರ ನಿಧಿಗೆ ನೀಡಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಡಿಸಿಎಂ ಸವದಿ ಚೆಕ್ ಹಸ್ತಾಂತರಿಸಿದ್ದಾರೆ. ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ,ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ ಸಹ ಈ ವೇಳೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಲಾಕ್ ಡೌನ್ ಪರಿಣಾಮ ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯದಲ್ಲಿ ಬಸ್ ಸಂಚಾರವಿಲ್ಲ. ಇದರಿಂಡ ಸಾರಿಗೆ ನಿಗಮಗಳ ಆದಾಯ ಸ್ಥಗಿತವಾಗಿದೆ. ಸಾರಿಗೆ ನೌಕರರ ಸಂಬಳ ಪಾವತಿಗೆ ಸರ್ಕಾರ ಹಣ ಬಿಡುಗಡೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com