ನಿಖಿಲ್ ವಿವಾಹಕ್ಕೆ  ನೀಡಿದ್ದ ವಾಹನಗಳ ಪಾಸ್ ಸಂಖ್ಯೆ ಎಷ್ಟು? ಮತ್ತೆ ಮಾಹಿತಿ ಕೇಳಿದ ಹೈಕೋರ್ಟ್

ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹಕ್ಕೆ ಸಂಬಂಧಿಸಿ ಎಷ್ಟು ವಾಹನಗಳಿಗೆ ಅನುಮತಿ ನೀಡಲಾಗಿತ್ತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. 

Published: 13th May 2020 07:51 AM  |   Last Updated: 13th May 2020 07:51 AM   |  A+A-


Nikhl and revathi wedding

ನಿಖಿಲ್ ರೇವತಿ ವಿವಾಹ

Posted By : Shilpa D
Source : The New Indian Express

ಬೆಂಗಳೂರು:  ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹಕ್ಕೆ ಸಂಬಂಧಿಸಿ ಎಷ್ಟು ವಾಹನಗಳಿಗೆ ಅನುಮತಿ ನೀಡಲಾಗಿತ್ತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. 

ಲಾಕ್ ಡೌನ್ ನಡುವೆ ನಿಖಿಲ್ ವಿವಾಹ ನಡೆದಿತ್ತು. ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ಪಟ್ಟಿತ್ತು.

ಜಿಲ್ಲಾಧಿಕಾರಿ ಅನುಮತಿ ನೀಡುವ ವಾಹನಗಳ ಸಂಖ್ಯೆ ನಮೂದಿಸಿ ಇರಲಿಲ್ಲ. ವಿವಾಹದಲ್ಲಿ ಪಾಲ್ಗೊಳ್ಳುವುದಕ್ಕೆ ಜನರ ಮಿತಿ ನಿಗದಿಪಡಿಸಬೇಕು. ಕೇಂದ್ರದ ಮಾರ್ಗಸೂಚಿಯಲ್ಲಿ ಡಿಸಿಗೆ ವಿವಾಹ ನಿಯಂತ್ರಣ ಅಧಿಕಾರವಿತ್ತು. ಆದರೆ ಏ.15. ರ ಮಾರ್ಗಸೂಚಿಯಲ್ಲಿ ವಿವಾಹಕ್ಕೆ ಸಂಖ್ಯಾ ಮಿತಿ ನಿಗದಿಪಡಿಸಿರಲಿಲ್ಲ. ಮೇ.1 ರ ಮಾರ್ಗಸೂಚಿಯಲ್ಲಿ 50 ಜನರ ಮಿತಿ
ನಿಗದಿಪಡಿಸಲಾಗಿತ್ತು. ಈ ಕಾರಣದಿಂ ಏ.17  ರಂದು ನಡೆದ ನಿಖಿಲ್ ವಿವಾಹಕ್ಕೆ ಸಂಖ್ಯಾ ಮಿತಿ ವಿಧಿಸಬೇಕಿತ್ತು ಎಂದು ಹೇಳಿದೆ.

ಮುಂದೆ ಇಂಥ ಲೋಪ ಮರುಕಳಿಸಲಿಲ್ಲ ಎಂದು ಸರ್ಕಾರಿ ವಕೀಲ ವಿಕ್ರಮ್ ಹುಯಿಲಗೋಳ ಹೈಕೋರ್ಟ್ ಗೆ ವಿನಂತಿ ಮಾಡಿಕೊಂಡಿದ್ದಾರೆ. ಆದರೆ ವಾಹನಗಳ ವಿಚಾರದಲ್ಲಿ ಖಡಕ್ ನಿರ್ಧಾರ ತೆಗೆದುಕೊಂಡಿರುವ ಹೈಕೋರ್ಟ್ ಅನುಮತಿ ನೀಡಿದ್ದರ ಬಗ್ಗೆ ವಿವರಣೆ ಕೇಳಿದೆ.

Stay up to date on all the latest ರಾಜ್ಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp