ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಮತ್ತೊಂದು ಬಲಿ: ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆ!

ರಾಜ್ಯಕ್ಕೆ ಕೊರೋನಾಘಾತ ಮುಂದುವರೆದಿದ್ದು ದಕ್ಷಿಣ ಕನ್ನಡದಲ್ಲಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

Published: 13th May 2020 03:02 PM  |   Last Updated: 14th May 2020 05:07 PM   |  A+A-


Corona

ಸಂಗ್ರಹ ಚಿತ್ರ

Posted By : Vishwanath S
Source : Online Desk

ಮಂಗಳೂರು: ರಾಜ್ಯಕ್ಕೆ ಕೊರೋನಾಘಾತ ಮುಂದುವರೆದಿದ್ದು ದಕ್ಷಿಣ ಕನ್ನಡದಲ್ಲಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. 

ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಬೋಳೂರಿನ 58 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಫಸ್ಟ್ ನ್ಯೂರೊ ಆಸ್ಪತ್ರೆಯಲ್ಲಿ ಮೆದುಳು ಸಂಬಂಧಿತ ಕಾಯಿಲೆಗೆ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಆಸ್ಪತ್ರೆಯ ಸ್ವೀಪರ್ ನಿಂದ ಮಹಿಳೆಗೆ ಸೋಂಕು ಹರಡಿತ್ತು. ಏಪ್ರಿಲ್ 20ರನ್ನು ಮಹಿಳೆಗೆ ಸೋಂಕು ತಗುಲಿದ್ದು ದೃಢಪಟ್ಟಿತ್ತು. 

ನಂತರ ಆಕೆಯನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮಂಗಳೂರಿನಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. 

ಬೆಳಗ್ಗೆ ಕಲಬುರಗಿಯ 60 ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿದ್ದರು. ಇದರೊಂದಿಗೆ ರಾಜ್ಯದಲ್ಲಿ ಇಂದು ಇಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. 

ಇನ್ನು ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 951 ತಲುಪಿದ್ದು, 33 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 442 ಮಂದಿ ಗುಣಮುಖರಾಗಿದ್ದಾರೆ.

Stay up to date on all the latest ರಾಜ್ಯ news
Poll
Babri Masjid

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯ ಒದಗಿಸಲಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp