ಎಲ್ಲಾ ವಾರ್ಡ್ ಗಳಲ್ಲಿ ಜನೌಷಧಿ ಕೇಂದ್ರ ಸ್ಥಾಪನೆಗೆ ಬಿಬಿಎಂಪಿಗೆ ಡಾ. ಸಿ.ಎನ್. ಅಶ್ವತ್ ನಾರಾಯಣ ನಿರ್ದೇಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಜನೌಷಧಿ ಕೇಂದ್ರಗಳ ಸ್ಥಾಪನೆ ಹಾಗೂ ಅವುಗಳು 24 ಗಂಟೆಯೂ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ ನಿರ್ದೇಶನ ನೀಡಿದ್ದಾರೆ.
ಡಾ. ಸಿ. ಎನ್. ಅಶ್ವತ್ ನಾರಾಯಣ
ಡಾ. ಸಿ. ಎನ್. ಅಶ್ವತ್ ನಾರಾಯಣ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಜನೌಷಧಿ ಕೇಂದ್ರಗಳ ಸ್ಥಾಪನೆ ಹಾಗೂ ಅವುಗಳು 24 ಗಂಟೆಯೂ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ ನಿರ್ದೇಶನ ನೀಡಿದ್ದಾರೆ.

ಉಭಯ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾಕ್ಟರ್ ಜೊತೆಗೆ ಟೆಲಿಕಾನ್ಫರೆನ್ಸ್ ಸೌಲಭ್ಯ ಹೊಂದುವಂತೆ, ರೌಂಡಿ ದಿ ಕ್ಲಾಕ್ ನಂತೆ  ರೋಗಿಗಳನ್ನು ವೈದ್ಯರು ನೋಡಿಕೊಳ್ಳುವಂತೆ ಮತ್ತು ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಔಷಧ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. 

ತುರ್ತು ಪ್ರಕರಣಗಳಿಗಾಗಿ ಖಾಸಗಿ ವೈದ್ಯರೊಂದಿಗೆ ಒಪ್ಪಂದ ಮಾಡಿಕೊಳ್ಳುವುದನ್ನು ಬಿಬಿಎಂಪಿ ಮತ್ತು ಆರೋಗ್ಯ ಅಧಿಕಾರಿಗಳು ಖಾತ್ರಿಮಾಡಿಕೊಳ್ಳಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜನೌಷಧಿ ಕೇಂದ್ರಗಳಿಗೆ ಭೇಟಿ ಮಾಡಿದ ಯಾವುದೇ ರೋಗಿ ವೈದ್ಯರಿಲ್ಲದೆ ಅವರು ಹಿಂತಿರುಗಬಾರದು ಎಂದು ಅವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com