ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ

ರಂಜಾನ್ ನಮಾಜ್ ಗೆ ಅವಕಾಶ ನೀಡಿ: ಮುಖ್ಯಮಂತ್ರಿಗೆ ಸಿಎಂ ಇಬ್ರಾಹಿಂ ಪತ್ರ

ಕೊರೋನಾ ಸಾಂಕ್ರಾಮಿಕ ರೋಗ ಎಂಬ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಸಾಮಾಜಿ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ, ಹೀಗಾಗಿ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಎಂಬ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಸಾಮಾಜಿ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ, ಹೀಗಾಗಿ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ರಂಜಾನ್ ಹಿನ್ನೆಲೆಯಲ್ಲಿ ಮುಸ್ಲಿಮ್ ಸಮುದಾಯಕ್ಕೆ ಈದ್ಗಾ ಮೈದಾನದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

24 ಮತ್ತು 25 ರಂದು ರಂಜಾನ್ ಆಚರಣೆ ಇದ್ದು, ಈ ವೇಳೆ ವಿಶೇಷ ಪ್ರಾರ್ಥನೆ ಮಾಡಬೇಕಾಗುತ್ತದೆ, ಹೀಗಾಗಿ ಇಡೀ ಮುಸ್ಲಿಮ್ ಸಮುದಾಯದ ಪರವಾಗಿ ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ, ರಂಜಾನ್ ದಿನ ಈದ್ಗಾ ಮೈದಾನದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಬೆಳಗ್ಗಿನಿಂದ ಮಧ್ಯಾಹ್ನ 1 ಗಂಟೆ ವರೆಗೆ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಮೆಡಿಕಲ್ ತಜ್ಞರ ಜೊತೆ ಸಮಾಲೋಚಿಸಿ  ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲಾ ಮುಸ್ಲಿಮರು ಈದ್ಗಾ ಮೈದಾನಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com