ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆ ಸಾಧ್ಯತೆ

ದೇಶಾದ್ಯಂತ ಕೋವಿಡ್-19 ಲಾಕ್ ಡೌನ್ ಮುಂದುವರೆದಿದ್ದು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸುಮಾರು 1 ಲಕ್ಷ ಪಂಚಾಯಿತಿ ಸದಸ್ಯರು, 6021 ಗ್ರಾಮ ಪಂಚಾಯಿತಿಗಳನ್ನು ಪ್ರತಿನಿಧಿಸುತ್ತಿದ್ದಾರೆ.
ಸೀಗೇಕುಪ್ಪೆ ಗ್ರಾಮ ಪಂಚಾಯಿತಿ ಚಿತ್ರ
ಸೀಗೇಕುಪ್ಪೆ ಗ್ರಾಮ ಪಂಚಾಯಿತಿ ಚಿತ್ರ

ಬೆಂಗಳೂರು: ದೇಶಾದ್ಯಂತ ಕೋವಿಡ್-19 ಲಾಕ್ ಡೌನ್ ಮುಂದುವರೆದಿದ್ದು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸುಮಾರು 1 ಲಕ್ಷ ಪಂಚಾಯಿತಿ ಸದಸ್ಯರು, 6021 ಗ್ರಾಮ ಪಂಚಾಯಿತಿಗಳನ್ನು ಪ್ರತಿನಿಧಿಸುತ್ತಿದ್ದಾರೆ.

ಕಳೆದ ಗ್ರಾಮ ಪಂಚಾಯಿತಿ ಚುನಾವಣೆ 2015ರ ಮೇ- ಜೂನ್ ನಲ್ಲಿ ನಡೆದಿತ್ತು. ಈ ಅವಧಿ ಮೇ 24 ರಂದು ಕೊನೆಯಾಗಲಿದೆ. 2020ರ ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಯೋಜಿಸಿದ್ದ  ಚುನಾವಣಾ ಆಯೋಗ,ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು.

ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಿಸುವ ಸಂಬಂಧ ಸಮಿತಿಯೊಂದನ್ನು ರಚಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇತ್ತೀಚಿಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ. ನಾಲ್ಕರಿಂದ ಆರು ತಿಂಗಳವರೆಗೂ ಅವಧಿ ವಿಸ್ತರಿಸಬೇಕೆಂಬ ಬೇಡಿಕೆ ಇದೆ. ಅಭಿವೃದ್ಧಿ ಕಾರ್ಯಗಳು ಮತ್ತಿತರ ಅಧಿಕೃತ ವಿಚಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಪಿಡಿಒಗಳಿಗೆ ನೀಡುವ ಪ್ರಸ್ತಾವವೂ ಇದೆ. 

ಪ್ರಸ್ತುತ ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಷರತ್ತುಗಳೊಂದಿಗೆ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಪಂಚಾಯತ್ ರಾಜ್ ಇಲಾಖೆ ಮೂಲಗಳಿಂದ ತಿಳಿದುಬಂದಿದೆ. ಆದರೆ, ಈ ನಿರ್ಧಾರವನ್ನು ಇನ್ನೂ ತೆಗೆದುಕೊಂಡಿಲ್ಲ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿ ಎಲ್ ಕೆ ಅತೀಕ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com