ಕೆ.ಎಂ.ಕಾರಿಯಪ್ಪ ಪುಣ್ಯಸ್ಮರಣೆ: ಮುಖ್ಯಮಂತ್ರಿ ಸೇರಿ ಗಣ್ಯರ ನಮನ

ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ, ಅವರ ಅಪ್ರತಿಮ ದೇಶಸೇವೆ, ಶೌರ್ಯ, ಸಾಹಸಗಳನ್ನು ಸ್ಮರಿಸಿಕೊಳ್ಳೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.
ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪ
ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪ

ಬೆಂಗಳೂರು: ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ, ಅವರ ಅಪ್ರತಿಮ ದೇಶಸೇವೆ, ಶೌರ್ಯ, ಸಾಹಸಗಳನ್ನು ಸ್ಮರಿಸಿಕೊಳ್ಳೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರ ಪುಣ್ಯತಿಥಿ ಸಂದರ್ಭದಲ್ಲಿ ಅವರ ಅಪ್ರತಿಮ ದೇಶಸೇವೆಯನ್ನು ಸ್ಮರಿಸೋಣ ಎಂದು ಹೇಳಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ, ಭಾರತೀಯ ಸೇನೆಯ ಪ್ರಪ್ರಥಮ ದಂಡನಾಯಕ, ಹೆಮ್ಮೆಯ ಕನ್ನಡಿಗ, ಕೊಡಗಿನ ವೀರಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪನವರ ಪುಣ್ಯತಿಥಿಯಂದು ಅವರ ದೇಶಸೇವೆ, ಶೌರ್ಯ, ಸಾಧನೆಗಳನ್ನು ಆದರಪೂರ್ವಕವಾಗಿ ಸ್ಮರಿಸೋಣ. ಕೆ.ಎಂ.ಕಾರಿಯಪ್ಪನವರು ಕಮಾಂಡರ್-ಇನ್-ಚೀಫ್ ಆಗಿ ನೇಮಕವಾದ ಜನವರಿ 15 ರಂದೇ, ಪ್ರತಿವರ್ಷ ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಸೇನಾನಿ ಸುಖದೇವ್ ಥಾಪರ್ ಜನ್ಮದಿನ: ಮುಖ್ಯಮಂತ್ರಿ ಸೇರಿ ಗಣ್ಯರ ನಮನ


ಸ್ವಾತಂತ್ರ್ಯ ಸೇನಾನಿ ಸುಖದೇವ್ ಥಾಪರ್ ಅವರ ಜನ್ಮದಿನವಾದ ಇಂದು ದೇಶಕ್ಕಾಗಿ ಅವರ ಮಹಾನ್ ತ್ಯಾಗವನ್ನು ಸ್ಮರಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಕ್ರಾಂತಿಕಾರಿ ಸುಖದೇವ್ ಥಾಪರ್ ಜಯಂತಿಯಂದು ಅವರನ್ನು ಸ್ಮರಿಸೋಣ ಎಂದು ಗೌರವ ಸಲ್ಲಿಸಿದ್ದಾರೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ತಾಯಿ ಭಾರತೀಯನ್ನು ಬ್ರಿಟಿಷರ ಕಪಿಮುಷ್ಟಿಯಿಂದ ಪಾರು ಮಾಡಲು ಹೋರಾಡಿ, ಪ್ರಾಣ ತ್ಯಾಗಮಾಡಿದ ಸುಖದೇವ್ ಥಾಪರ್ ಅವರ ಜನ್ಮದಿನದಂದು ನನ್ನ ಗೌರವ ನಮನಗಳು‌ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com