ಮೆಕ್ಕೆಜೋಳ ಬೆಳೆದ ರೈತರಿಗೆ 500 ಕೋಟಿ ರೂ. ಪ್ಯಾಕೇಜ್‌ ಘೋಷಿಸಿದ ಸಿಎಂ ಯಡಿಯೂರಪ್ಪ

ಪ್ರಾಕೃತಿಕ ವಿಕೋಪಗಳಲ್ಲಿ ಮೃತಪಟ್ಟ ಕುರಿ, ಮೇಕೆ, ಜಾನುವಾರುಗಳಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ಮುಂದುವರೆಸಲಾಗುವುದು. ಮೆಕ್ಕೆಜೋಳ ಬೆಳೆದ ರಾಜ್ಯದ 10 ಲಕ್ಷ ರೈತರಿಗೆ ತಲಾ‌ ಐದು‌ ಸಾವಿರ ರೂಪಾಯಿಯಂತೆ ಪರಿಹಾರ ನೀಡಲಾಗುವುದು. ಈ ಯೋಜನೆಗೆ 500 ಕೋಟಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಪ್ರಾಕೃತಿಕ ವಿಕೋಪಗಳಲ್ಲಿ ಮೃತಪಟ್ಟ ಕುರಿ, ಮೇಕೆ, ಜಾನುವಾರುಗಳಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ಮುಂದುವರೆಸಲಾಗುವುದು. ಮೆಕ್ಕೆಜೋಳ ಬೆಳೆದ ರಾಜ್ಯದ 10 ಲಕ್ಷ ರೈತರಿಗೆ ತಲಾ‌ ಐದು‌ ಸಾವಿರ ರೂಪಾಯಿಯಂತೆ ಪರಿಹಾರ ನೀಡಲಾಗುವುದು. ಈ ಯೋಜನೆಗೆ 500 ಕೋಟಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ 19 ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 42 ಸಾವಿರಗ 500 ಆಶಾ ಕಾರ್ಯಕರ್ತೆಯರ ವಿಶೇಷ ಸೇವೆಯನ್ನು ಗುರುತಿಸಿ ತಲಾ 3 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಇದಕ್ಕೆ 12 ಕೋಟಿ ರೂಪಾಯಿ ವೆಚ್ಚವಾಗಲಿದೆ. ಈ ಮೊತ್ತವನ್ನು ಸಹಕಾರ ಸಂಘ ಸಂಸ್ಥೆಗಳಿಂದ ಕ್ರೋಢೀಕರಿಸಿ ಸಹಕಾರ ಇಲಾಖೆಯ ವತಿಯಿಂದ ನೀಡಲಾಗುತ್ತದೆ ಎಂದರು.

ಕೋವಿಡ್ 19ರ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ ಮೆಕ್ಕೆಜೋಳ ಬೆಳೆಗಾರರಿಗೆ ಕೆಎಂಎಫ್ ಮೂಲಕ ಮೆಕ್ಕೆ ಜೋಳ ಖರೀದಿಸಲು ಈಗಾಗಲೇ 4ಜಿ ವಿನಾಯಿತಿ ನೀಡಲಾಗಿದೆ. ಕೇಂದ್ರ ಸರ್ಕಾರ 1,760 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿ ಪಡಿಸಿದೆ. ಆದರೆ ರೈತರಿಗೆ ಇಷ್ಟು ಬೆಲೆ ದೊರೆಯದ ಕಾರಣ ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆದಿರುವ ಸುಮಾರು 10 ಲಕ್ಷ ರೈತರಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು. ಇದಕ್ಕೆ ಸುಮಾರು 500 ಕೋಟಿ ರೂ. ವೆಚ್ಚವಾಗಲಿದೆ. ಇದರಿಂದಾಗಿ ಕೋವಿಡ್ 19 ಹಿನ್ನೆಲೆಯಲ್ಲಿ ಘೋಷಿಸಲಾದ ಪ್ಯಾಕೇಜ್ ಮೊತ್ತ 2 ಸಾವಿರದ 272 ಕೋಟಿ ರೂ ಗಳಷ್ಟಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಗೋವಿಂದ ಕಾರಜೋಳ, ಅಶ್ವತ್ಥ ನಾರಾಯಣ್, ಸಚಿವರಾದ ಡಾ. ಕೆ ಸುಧಾಕರ್, ವಿ. ಸೋಮಣ್ಣ, ಎಸ್. ಟಿ.ಸೋಮಶೇಖರ್, ಜಗದೀಶ್ ಶೆಟ್ಟರ್, ಬಿ.ಸಿ. ಪಾಟೀಲ್, ಶಿವರಾಂ ಹೆಬ್ಬಾರ್ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com