ಬೆಳಗಾವಿ: ಮಹಾರಾಷ್ಟ್ರದಿಂದ ಬಂದ ಗರ್ಭಿಣಿಗೆ ಕೊರೋನಾ ಸೋಂಕು

ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದಿರುವ ಗರ್ಭಿಣಿಗೆ ಕೋವಿಡ್‌ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವಿಚಾರವಾಗಿ, ಇ-ಪಾಸ್‌ ಪಡೆಯದೆ ಗರ್ಭಿಣಿಯನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ ಕರೆ ತಂದ ಮೂವರ ವಿರುದ್ಧ ಪೊಲೀಸ್‌ ದೂರು ದಾಖಲಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದಿರುವ ಗರ್ಭಿಣಿಗೆ ಕೋವಿಡ್‌ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವಿಚಾರವಾಗಿ, ಇ-ಪಾಸ್‌ ಪಡೆಯದೆ ಗರ್ಭಿಣಿಯನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ ಕರೆ ತಂದ ಮೂವರ ವಿರುದ್ಧ ಪೊಲೀಸ್‌ ದೂರು ದಾಖಲಿಸಲಾಗಿದೆ.

ಸದಾಶಿವ ನಗರದ 27 ವರ್ಷದ ಮಹಿಳೆ (ಪಿ-974)ಯಲ್ಲಿ  ಸೋಂಕು ಪತ್ತೆಯಾಗಿದೆ. ಲಾಕ್‌ಡೌನ್‌ ಮಾರ್ಗಸೂಚಿ ಪ್ರಕಾರ ಸೇವಾಸಿಂಧು ಮೂಲಕ ಇ-ಪಾಸ್‌ ಪಡೆಯದೆ ನಿಯಮ ಉಲ್ಲಂಘಿಸಿ ಮಹಿಳೆಯನ್ನು ಮಹಾರಾಷ್ಟ್ರದ ಧಾರಾವಿ ಸ್ಲಂ ನಿಂದ ಬೆಳಗಾವಿಗೆ ಕರೆ ತರಲಾಗಿತ್ತು. ಆ ಆರೋಪದ ಹಿನ್ನೆಲೆಯಲ್ಲಿ ಸೋಂಕಿತ ಮಹಿಳೆಯ ಪತಿ, ಸಹೋದರ ಮತ್ತು ವಾಹನ
ಚಾಲಕನ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿಪ್ರಕರಣ ದಾಖಲಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಡಾ.ಎಸ್‌.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಸೋಂಕಿತ ಮಹಿಳೆಯನ್ನು ಈಗಾಗಲೇ ಆಸ್ಪತ್ರೆಗೆ ಸೇರಿಸಲಾಗಿದೆ. ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಹತ್ತು ಜನರನ್ನು  ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com