ಸದ್ಯಕ್ಕೆ ಕೊರೋನಾ ನಿರ್ಮೂಲನೆ ಅಸಾಧ್ಯ; ಅದರೊಂದಿಗೆ ಬದುಕುವುದನ್ನು ಕಲಿಯಬೇಕು: ಡಾ. ಕೆ.ಸುಧಾಕರ್

ಕಳೆದ ಕೆಲ ದಿನಗಳಿಂದ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಸೋಂಕು ಸುಲಭದಲ್ಲಿ ನಿರ್ಮೂಲನೆ ಆಗಲಾರದು ಎಂದು ನಿನ್ನೆ ವಿಶ್ವಸಂಸ್ಥೆ ಸಹ ಖಚಿತ ಪಡಿಸಿದೆ. ಹೀಗಾಗಿ ನಾವು ಇದರ ಜೊತೆಗೆ ಬದುಕುವುದನ್ನು ಕಲಿಯಬೇಕು ಸಚಿವ ವೈದ್ಯಕೀಯ ಶಿಕ್ಷಣ ಸಚಿವ ಡಾ  ಕೆ. ಸುಧಾಕರ್ ಹೇಳಿದ್ದಾರೆ.
ಸಚಿವ ಸುಧಾಕರ್
ಸಚಿವ ಸುಧಾಕರ್

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಸೋಂಕು ಸುಲಭದಲ್ಲಿ ನಿರ್ಮೂಲನೆ ಆಗಲಾರದು ಎಂದು ನಿನ್ನೆ ವಿಶ್ವಸಂಸ್ಥೆ ಸಹ ಖಚಿತ ಪಡಿಸಿದೆ. ಹೀಗಾಗಿ ನಾವು ಇದರ ಜೊತೆಗೆ ಬದುಕುವುದನ್ನು ಕಲಿಯಬೇಕು ಸಚಿವ ವೈದ್ಯಕೀಯ ಶಿಕ್ಷಣ ಸಚಿವ ಡಾ  ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆ ಅದ ಮೇಲೆ ಇದೀಗ ನಾಲ್ಕನೇ ಹಂತದ ಲಾಕ್ ಡೌನ್‌ಗೆ ಹೋಗುತ್ತಿದ್ದೇವೆ. ಎಲ್ಲಾ ಕಡೆಯಿಂದ ನಾವು ನಮ್ಮ ರಾಜ್ಯದವರನ್ನು ರಾಜ್ಯಕ್ಕೆ ಕರೆತರುತ್ತಿದ್ದೇವೆ. ಸೊಂಕು ಹೆಚ್ಚಿರುವ ದೇಶದಿಂದಲೂ  ಭಾರತೀಯರು ಬಂದಿದ್ದಾರೆ. ಇವರ ಮೂಲಕ ಸೋಂಕು ಹರಡದಂತೆ ಬಹಳ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

ಸೋಂಕಿತರ ಚಿಕಿತ್ಸೆಗಾಗಿ ಒಂದು ಲಕ್ಷ ಹಾಸಿಗೆ ವ್ಯವಸ್ಥೆ ರಾಜ್ಯದಲ್ಲಿ ಮಾಡಿಕೊಳ್ಳಲಾಗಿದೆ. ಜನವರಿಂದ ಪ್ರಾರಂಭವಾಗಿ ಮೇ ತಿಂಗಳವರೆಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1000ಕ್ಕೆ ಏರಿದೆ. ಬೇರೆ ರಾಷ್ಟ್ರ, ರಾಜ್ಯಕ್ಕೆ ಹೋಲಿಸಿದರೆ ಇದು ಅತ್ಯಂತ ಕಡಿಮೆ ಪ್ರಮಾಣವಾಗಿದೆ. ಕೇರಳ  ರಾಜ್ಯದವರ ಜೊತೆ ಅನೇಕ ವಿಚಾರಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡಿದ್ದೇವೆ. ಅವರು ಹೊರ ದೇಶದಿಂದ‌ ಬಂದರೆ ಏನು ಮಾಡುವುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಪ್ರಕೃತಿ ವಿಕೋಪ ಎರಡು ಬಾರಿ ನಿಭಾಯಿಸಿದ್ದ ಕೇರಳ ಸರ್ಕಾರ ಇದೀಗ ಸೋಂಕು ಎದುರಿಸಲು  ಸಿದ್ಧವಾಗಿದೆ. ಇದುವರೆಗೂ ಕೇರಳ ಸರ್ಕಾರ 30 ಸಾವಿರ ಟೆಸ್ಟ್ ಮಾಡಿದೆ. ನಮ್ಮಲ್ಲಿ ಅದಕ್ಕಿಂತ ಹೆಚ್ಚು ಪರೀಕ್ಷೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸೋಂಕು ನಿಯಂತ್ರಣ ಮಾಡುವಲ್ಲಿ ಮುಂದಿದೆ ಎಂದು ಸುಧಾಕರ್ ಹೇಳಿದರು.

ರಾಜ್ಯದಲ್ಲಿ ಕೊರೊನಾ ಸಮುದಾಯ ಪ್ರಸರಣ ಹಂತ ತಲುಪಿಲ್ಲ
ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಸಮುದಾಯ ಪ್ರಸರಣ ಹಂತ ತಲುಪಿಲ್ಲ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಶುಕ್ರವಾರ ತಿಳಿಸಿದ್ದಾರೆ. ಅನ್ಯ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ  ಬಂದಿರುವ ಕೊರೊನಾ ಪಾಸಿಟಿವ್ ಹೊಂದಿರುವ ವ್ಯಕ್ತಿಗಳಿಗೆ ಪ್ರಸ್ತುತ ಕ್ವಾರಂಟೈನ್ ಕೇಂದ್ರಗಳಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಪತ್ತೆಯಾಗಿರುವ ಶೇ 25 ರಷ್ಟು ಕೋವಿಡ್ ಸೋಂಕು ಪ್ರಕರಣಗಳು ವಿದೇಶಗಳಿಂದ ಅಥವಾ  ಅನ್ಯರಾಜ್ಯಗಳಿಂದ ಬಂದವರಿಂದ ತಗುಲಿರುವ ಪ್ರಕರಣಗಳಾಗಿವೆ. ಕೇವಲ ಶೇ. 7 ರಷ್ಟು ಪ್ರಕರಣಗಳು ಫ್ಲೂ ನಂತಹ ರೋಗಗಳಿಗೆ ಸಂಬಂಧಿಸಿದಾಗಿವೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ನಿತ್ಯ ಸರಾಸರಿ ಶೇ. 5.4 ರಷ್ಟು ಪ್ರಕರಣಗಳು ವರದಿಯಾಗುತ್ತಿದ್ದು, ರಾಷ್ಟ್ರೀಯ  ಮಟ್ಟದಲ್ಲಿ ಶೇ.11.8ರಷ್ಟು ವರದಿಯಾಗುತ್ತಿವೆ. ಗುರುವಾರದ ಸಂಜೆಯವರೆಗೆ ರಾಜ್ಯದಲ್ಲಿ 893 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 35 ಮಂದಿ ವೈರಸ್ ನಿಂದ ಮೃತಪಟ್ಟಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com