ಕೊರೋನಾ ಎಫೆಕ್ಟ್: ಗ್ರಾಮ ಪಂಚಾಯತ್ ಚುನಾವಣೆ 6 ತಿಂಗಳು ಮುಂದೂಡಿಕೆ- ಕೆ.ಎಸ್. ಈಶ್ವರಪ್ಪ

ರಾಜ್ಯದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಪಂಚಾಯತ್ ಚುನಾವಣೆಯನ್ನು 6 ತಿಂಗಳು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. 
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಪಂಚಾಯತ್ ಚುನಾವಣೆಯನ್ನು 6 ತಿಂಗಳು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. 

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಒಟ್ಟಾರೆ 6,012 ಗ್ರಾಮ ಪಂಚಾಯತ್'ಗಳಿದ್ದು, ಕೆಲವು ಪಂಚಾಯತ್ ಗಳನ್ನು ಹೊರತುಪಡಿಸಿದರೆ, ಬಹುತೇಕ ಗ್ರಾಮ ಪಂಚಾಯತ್ ಗಳ ಅವಧಿ ಜೂನ್-ಜುಲೈರೊಳಗೆ ಅಂತ್ಯಗೊಳ್ಳಲಿದೆ. ಕೊರೋನಾ ಪರಿಣಾಮ ಚುನಾವಣೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಚುನಾವಣೆಯನ್ನು 6 ತಿಂಗಳು ಮುಂದೂಡಲಾಗಿದೆ ಎಂದು ಹೇಳಿದ್ದಾರೆ. 

ಆದರೂ ಆಡಳಿತ ವಿಭಾಗ ಖಾಲಿಯಿರಲು ನಾವು ಬಿಡುವುದಿಲ್ಲ. ಪಂಚಾಯತ್ ರಾಜ್ ಕಾಯ್ದೆ 1993 ಮತ್ತು ಗ್ರಾಮ ಪಂಜಾಯತ್ ಅಡಿಯಲ್ಲಿ ಆಡಳಿತ ಮಂಡಳಿಯನ್ನು ನಿಯೋಜಿಸಿ ಎಂದಿನ ಕಾರ್ಯಗಳು ಮುಂದುವರೆಯುವಂತೆ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com