ಕುಡಿಯುವ ನೀರಿನ ಘಟಕದಲ್ಲಿ ಅವ್ಯವಸ್ಥೆ: ಸಚಿವ ಬಿ.ಸಿ.ಪಾಟೀಲ್ ಗರಂ

ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸ್ವಚ್ಛತೆ ಇಲ್ಲದ್ದನ್ನು ಕಂಡ ಕೃಷಿ ಸಚಿವ ಬಿ.ಸಿ.ಪಾಟೀಲ್  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಹಾವೇರಿಯ ಸ್ವ ಕ್ಷೇತ್ರ ಹಿರೇಕೆರೂರಿನಲ್ಲಿ ನಡೆದಿದೆ.
ಸಚಿವ ಬಿ. ಸಿ. ಪಾಟೀಲ್
ಸಚಿವ ಬಿ. ಸಿ. ಪಾಟೀಲ್

ಹಾವೇರಿ: ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸ್ವಚ್ಛತೆ ಇಲ್ಲದ್ದನ್ನು ಕಂಡ ಕೃಷಿ ಸಚಿವ ಬಿ.ಸಿ.ಪಾಟೀಲ್  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಹಾವೇರಿಯ ಸ್ವ ಕ್ಷೇತ್ರ ಹಿರೇಕೆರೂರಿನಲ್ಲಿ ನಡೆದಿದೆ.

ಇಂದು ಹಿರೇಕೆರೂರಿನಲ್ಲಿ ವಿವಿಧ  ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು, ಪಂಚಾಯತ್ ರಾಜ್ ಇಂಜಿನಿಯರಿಂಗ್  ಇಲಾಖೆಯ 2019- 20 ನೇ ಸಾಲಿನ 5,045 ಯೋಜನೆಯಡಿ ಚನ್ನಳ್ಳಿ ಗ್ರಾಮದಿಂದ ದೂದಿಹಳ್ಳಿ ಗ್ರಾಮದ ವರೆಗೆ ರಸ್ತೆ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ  ಚನ್ನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಪರಿಶೀಲಿಸಿದರು. ಘಟಕದಲ್ಲಿ ಸರಿಯಾಗಿ ಕುಡಿಯುವ ನೀರು ಬರದಿರುವುದನ್ನು ಹಾಗೂ ಸುತ್ತಮುತ್ತ ಅಸ್ವಚ್ಛತೆ  ಕಂಡು ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com