ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಸಹಾಯ ಧನ ವಿತರಣೆಗೆ ಸೋಮಶೇಖರ್ ಚಾಲನೆ

ಕೋವಿಡ್ 19 ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯನ್ನು ಸಹಕಾರ ಇಲಾಖೆ ವತಿಯಿಂದ ಕೊಡುತ್ತಿದ್ದೇವೆ.
ಸೋಮಶೇಖರ್
ಸೋಮಶೇಖರ್

ಮೈಸೂರು: ಕೋವಿಡ್ 19 ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯನ್ನು ಸಹಕಾರ ಇಲಾಖೆ ವತಿಯಿಂದ ಕೊಡುತ್ತಿದ್ದೇವೆ. ಇದಕ್ಕಾಗಿ ಒಟ್ಟು 12 ಕೋಟಿ 37 ಲಕ್ಷ ರೂಪಾಯಿ ಖರ್ಚು ಆಗಲಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ರಾಜ್ಯದ 40,500 ಆಶಾ ಕಾರ್ಯಕರ್ತರಿಗೆ ಅನುಕೂಲವಾಗುವ ತಲಾ 3 ಸಾವಿರ ರೂಪಾಯಿ ಸಹಾಯಧನ ವಿತರಣೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ 180 ಜನರಿಗೆ ಮೈಸೂರಿನಲ್ಲಿ ವಿತರಣೆ ಮಾಡುವ ಮೂಲಕ ಸಚಿವರು ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಕೊರೋನಾ ವಿರುದ್ಧ ಹೋರಾಡಿದ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರಿಗೆ ಸಹಾಯಧನ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಕೇಳಿದಾಗ ಇಲಾಖೆ ವತಿಯಿಂದಲೇ ಹಣವನ್ನು ಭರಿಸುವುದಾಗಿ ತಿಳಿಸಿದೆ. ನಂತರ ಶುಕ್ರವಾರ ಮುಖ್ಯಮಂತ್ರಿಗಳು ಸಹಾಯಧನದ ಬಗ್ಗೆ ಘೋಷಿಸಿದರು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com