ರಾಜ್ಯದಲ್ಲಿ ಕೊರೋನಾ ಸಮುದಾಯಕ್ಕೆ ಹರಡಿಲ್ಲ, ಇತರೆ ರಾಜ್ಯಗಳಿಂದ ಬಂದವರಲ್ಲೇ ಹೆಚ್ಚು ಸೋಂಕು: ಸಚಿವ ಸುಧಾಕರ್ 

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದ್ದು, ಸಮುದಾಯಕ್ಕೆ ಹರಡಿಲ್ಲ. ಹೀಗಾಗಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಆತಂಕ ಬೇಡ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದ್ದು, ಸಮುದಾಯಕ್ಕೆ ಹರಡಿಲ್ಲ. ಹೀಗಾಗಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಆತಂಕ ಬೇಡ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ಹೇಳಿದ್ದಾರೆ. 

ರಾಜ್ಯ ಸರ್ಕಾರವು ಕೊರೋನಾ ವಿರುದ್ಧ ಹೋರಾಡಲು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಸೋಂಕಿತ ಪ್ರದೇಶ ಎಂದು ಗುರುತಿಸಿರುವ ಕಂಟೈನ್ಮೆಂಟ್ ವಲಯ ಹಾಗೂ ಸೋಂಕಿತರ ಸಂಪರ್ಕದಿಂದ ಮಾತ್ರವೇ ಸೋಂಕು ಹರಡುತ್ತಿದೆ. ಹೀಗಾಗಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಕಂಡು ಬಂದಿರುವ ಒಟ್ಟು ಪ್ರಕರಣಗಳಲ್ಲಿ ಶೇ.25 ಪ್ರಕರಣ ವಿದೇಶ ಹಾಗೂ ವಿವಿಧ ರಾಜ್ಯಗಳಿಂದ ಆಗಮಿಸಿರುವ ಸೋಂಕಿತರೇ ಇದ್ದಾರೆ. ಉಳಿದಂತೆ ಶೇ.65 ಪ್ರಕರಣಗಳು ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಿಂದ ಬಂದಿದೆ. ಶೇ.7ರಷ್ಟು ಪ್ರಕರಣ ತೀವ್ರ ಉಸಿರಾಟ ತೊಂದರೆ (ಸಾರಿ) ಹಾಗೂ ಇತರೆ ಸೋಂಕಿನಿಂದ ನರಳುತ್ತಿದ್ದವರಲ್ಲಿ ಕಂಡು ಬಂದಿದೆ. 

ರಾಜ್ಯದಲ್ಲಿ ಈವರೆಗೆ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ಪರೀಕ್ಷೆ ನಡಿಸಿದ್ದು, ಶೇ.1ರಷ್ಟು ಮಂದಿಗೆ ಮಾತ್ರ ಸೋಂಕು ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com