ಗೃಹ ಮಂಡಳಿ ವಸತಿ ಯೋಜನೆಗಳ ವಿಳಂಬ ಕಂಡು ಬಂದರೆ ಕಠಿಣ ಕ್ರಮ: ಸೋಮಣ್ಣ ಎಚ್ಚರಿಕೆ

ಕರ್ನಾಟಕ ಗೃಹ ಮಂಡಳಿಯ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದ್ದಾರೆ.
ಸೋಮಣ್ಣ
ಸೋಮಣ್ಣ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರಿನಲ್ಲಿ ಗೃಹ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವಂತೆ ಆಯುಕ್ತರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಗೃಹ ಮಂಡಳಿಯ ಯೋಜನೆಗಳಿಗೆ ಸಂಬಂಧಿಸಿದ ಸ್ಥಳೀಯ ಯೋಜನಾ ಪ್ರಾಧಿಕಾರಗಳು ಶೀಘ್ರ ಮಂಜೂರಾತಿ ನೀಡುವಂತೆ ವಸತಿ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com