ಸಿಲಿಕಾನ್ ಸಿಟಿ ಜನತೆಗೆ ಗುಡ್ ನ್ಯೂಸ್: ಮೇ.18 ರಿಂದ ಬಿಎಂಟಿಸಿ ಬಸ್ ಸಂಚಾರ ಆರಂಭ

ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಸೇವೆಯನ್ನು ಸ್ಥಗಿತಗೊಳಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯು ಇದೀಗ ಮತ್ತೆ ಸೋಮವಾರದಿಂದ ತನ್ನ ಸಂಚಾರವನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಸೇವೆಯನ್ನು ಸ್ಥಗಿತಗೊಳಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯು ಇದೀಗ ಮತ್ತೆ ಸೋಮವಾರದಿಂದ ತನ್ನ ಸಂಚಾರವನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕೊರೋನಾ ನಿಗ್ರಹಿಸುವ ನಿಟ್ಟಿನಲ್ಲಿ ಜಾರಿಗೆ ತರಲಾಗಿದ್ದ ಲಾಕ್'ಡೌನ್ 3 ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೇ.18ರಿಂದ ಬಸ್ ಸಂಚಾರ ಆರಂಭಿಸಲು ಬಿಎಂಟಿಸಿ ನಿರ್ಧರಿಸಿದೆ ಎನ್ನಲಾಗುತ್ತಿದೆ. 

ಕಾರ್ಯನಿರ್ವಹಿಸಲು ನಮ್ಮ ಸಿಬ್ಬಂದಿಗಳು ಸಿದ್ಧರಾಗಿದ್ದಾರೆ. ಪ್ರತೀ ಬಸ್ ನಲ್ಲಿ ಕೇವಲ 30 ಮಂದಿ ಪ್ರಯಾಣಿಕರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಸ್ ನಿಲ್ದಾಣಗಳಲ್ಲಿ ವೃತ್ತಗಳನ್ನು ಹಾಕಲಾಗುತ್ತದೆ. ಕೇಂದ್ರ ಸರ್ಕಾರ ಒಪ್ಪಿಗೆ ನೀಡುತ್ತಿದ್ದಂತೆಯೇ ಕೆಎಸ್ಆರ್'ಟಿಸಿ ಕೂಡ ತನ್ನ ಕಾರ್ಯ ಆರಂಭಿಸಲಿದೆ. ಮೊದಲ ಹಂತದಲ್ಲಿ ಅರ್ಧದಷ್ಟು ಬಸ್ ಗಳು ಮಾತ್ರ ಸಂಚಾರ ಆರಂಭಿಸಲಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಅವರು ಹೇಳಿದ್ದಾರೆ. 

ಈಗಾಗಲೇ ಇತರೆ ರಾಜ್ಯ ಸರ್ಕಾರಗಳ ಸಾರಿಗೆ ನಿಗಮಗಳಿಗೂ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದ್ದು, ರಸ್ತೆಗಳಲ್ಲಿ ನಡೆದು ಹೋಗುವ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳ ತಮ್ಮ ತಮ್ಮ ಮನೆ ಸೇರಲು ಅವಕಾಶ ಮಾಡಲಾಗುತ್ತದೆ. ವಲಸಿಗರ ಪ್ರಯಾಣ ಶುಲ್ಕವನ್ನು ನಿಗಮವೇ ಭರಿಸಲಿದೆ ಎಂದು ತಿಳಿದುಬಂದಿದೆ. 

ಗಡಿಯಲ್ಲಿ ಪಾಕ್ ಉದ್ಧಟತನ: ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ
ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ತಿಳಿದಬಂದಿದೆ. 

ದಿಗ್ವಾರ್ ಸೆಕ್ಟರ್ ಬಳಿ ಇಂದು ಬೆಳಿಗ್ಗೆ 8.40ರ ಸುಮಾರಿಗೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ. 

ದಾಳಿಯಲ್ಲಿ ಯಾವುದೇ ರೀತಿಯ ಸಾವು ನೋವುಗಳು ಸಂಭವಿಸಿಲ್ಲ. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com