ಹೋಟೆಲ್, ಆತಿಥ್ಯ ಉದ್ಯಮಗಳ ಕಾರ್ಯಾರಂಭ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ: ಸಿಟಿ. ರವಿ

ಹೋಟೆಲ್, ಆತಿಥ್ಯ ಉದ್ಯಮಗಳ ಕಾರ್ಯಾರಂಭ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಯವರು ಹೇಳಿದ್ದಾರೆ. 
ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ
ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ

ಬೆಂಗಳೂರು: ಹೋಟೆಲ್, ಆತಿಥ್ಯ ಉದ್ಯಮಗಳ ಕಾರ್ಯಾರಂಭ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಯವರು ಹೇಳಿದ್ದಾರೆ. 

ಸೋಮವಾರದಿಂದ ಹೋಟೆಲ್ ಹಾಗೂ ಆತಿಥ್ಯ ಉದ್ಯಮಗಳು ಕಾರ್ಯಾರಂಭಗೊಳ್ಳಲಿವೆ ಎಂಬ ವದಂತಿಗಳನ್ನು ರಾಜ್ಯ ಪ್ರವಾಸೋದ್ಯಮ ಸಚಿವ ಸಿಟಿ ರವಿಯವರು ತಿರಸ್ಕರಿಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 

ಕಾರ್ಯಗಳನ್ನು ಪುನರಾರಂಭಿಸಲು ಅವಕಾಶ ನೀಡುವಂತೆ ಹೋಟೆಲ್, ಜಿಮ್, ಸ್ವಿಮ್ಮಿಂಗ್ ಪೂಲ್ ಗಳು ಮನವಿಗಳನ್ನು ಸಲ್ಲಿಸಿವೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೂ ಮಾತುಕತೆ ನಡೆಸಲಾಗಿದೆ. ಕೇಂದ್ರ ಗೃಹ ಸಚಿವಾಲಯದೊಂದಿದೆ ಮಾತುಕತೆ ನಡೆಸಿದ ಬಳಿಕವಷ್ಟೇ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯ ಎಂದು ತಿಳಿಸಿದ್ದಾರೆ. 

ರಾಜ್ಯದಲ್ಲಿ ಗ್ರೀನ್ ಝೋನ್ ಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಈಗಾಗಲೇ ಅರಣ್ಯ ಪ್ರದೇಶಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಆತಿಥ್ಯ ಉದ್ಯಮ ಆರಂಭಿಸುವ ಕಾರ್ಯಾಚರಣೆ ಕುರಿತು ಸರ್ಕಾರದ ಜೊತೆಯಾಗಿಲೀ, ಸಚಿವಾಲಯದೊಂದಿಗೆ ಆಗಲೀ ಈ ವರೆಗೂ ಯಾವುದೇ ರೀತಿಯ ಮಾತುಕತೆಗಳೂ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com