ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಆತ್ಮ ನಿರ್ಭರ್ ಭಾರತ್ ” ಪ್ಯಾಕೇಜ್‍ನ ಐದನೇ ಹಂತ ಆರ್ಥಿಕ ಸುಧಾರಣೆಗೆ ಒತ್ತು-ಯಡಿಯೂರಪ್ಪ

ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್‍ನ 5 ನೇ ದಿನದ ಘೋಷಣೆಗಳು, ಕಾರ್ಮಿಕರಿಗೆ ಉದ್ಯೋಗ ಸೃಜನೆ, ಆರೋಗ್ಯ, ಶಿಕ್ಷಣ ಕ್ಷೇತ್ರದ ಸುಧಾರಣೆಗಳು, ಕೈಗಾರಿಕೆ ವಲಯದ ಕಾನೂನು ಸುಧಾರಣೆ ಹಾಗೂ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ. 

ಬೆಂಗಳೂರು: ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್‍ನ 5 ನೇ ದಿನದ ಘೋಷಣೆಗಳು, ಕಾರ್ಮಿಕರಿಗೆ ಉದ್ಯೋಗ ಸೃಜನೆ, ಆರೋಗ್ಯ, ಶಿಕ್ಷಣ ಕ್ಷೇತ್ರದ ಸುಧಾರಣೆಗಳು, ಕೈಗಾರಿಕೆ ವಲಯದ ಕಾನೂನು ಸುಧಾರಣೆ ಹಾಗೂ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ. 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪ್ಯಾಕೇಜ್ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕೇಂದ್ರ ಸರ್ಕಾರದ “ಆತ್ಮ ನಿರ್ಭರ್ ಭಾರತ್ ದ ಆಶಯ ಸಾಕಾರಗೊಳಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲೂ ಶ್ರಮಿಸಲಿದೆ ಎಂದು ಮುಖ್ಯಮಂತ್ರಿಗಳು ಕೇಂದ್ರಕ್ಕೆ ಆಶ್ವಾಸನೆ ಕೊಟ್ಟಿದ್ದಾರೆ.

ಟಿವಿ ಚಾನೆಲ್ ಗಳನ್ನು ಪ್ರಾರಂಭ ಮಾಡಿ ಮಕ್ಕಳಿಗೆ ಪಾಠ ಹೇಳುವುದು ಒಳ್ಳೆಯ ನಿರ್ಧಾರ, ಇದರಿಂದ ಶಾಲಾ ದಿನಗಳನ್ನು ಕಳೆದುಕೊಂಡ ಮಕ್ಕಳಿಗೆ ಉತ್ತಮ ಪ್ರಯೋಜನವಾಗಲಿದೆ. ಇ- ವಿದ್ಯಾ ಯೋಜನೆ ದೇಶದ ವಿದ್ಯಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕೋವಿಡ್-19 ಕಾರಣ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಔದ್ಯೋಗಿಕ ಘಟಕಗಳು ಮತ್ತು ವ್ಯಕ್ತಿಗಳ ವಿರುದ್ಧ ಆರ್ಥಿಕ ದಿವಾಳಿತನದ ಕಾನೂನಿಗೆ ಒಳಪಡಿಸಲಾಗುವುದಿಲ್ಲ ಎಂಬ ತೀರ್ಮಾನ ಎಂಎಸ್ ಎಂಇ ಮಾಲೀಕರಿಗೆ ನೆಮ್ಮದಿ ತರಲಿದೆ ಮತ್ತು ಅವರಿಗೆ ಇನ್ನೊಮ್ಮೆ ಆರ್ಥಿಕ ಪುನಶ್ಚೇತನಕ್ಕೆ ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com