ಸೂಪರ್ ಸ್ಪ್ರೆಡರ್ ಆದ ಶಿವಾಜಿನಗರ ಶಿಫಾ ಆಸ್ಪತ್ರೆ ಸಿಬ್ಬಂದಿ: ಒಬ್ಬನಿಂದ ಬರೋಬ್ಬರಿ 30 ಮಂದಿಗೆ ಸೋಂಕು

ಪಾದರಾಯನಪುರ, ಹೊಂಗಸಂದ್ರದ ಬಳಿಕ ಇದೀಗ ಶಿವಾಜಿನಗರ ಅತ್ಯಂತ ಹೆಚ್ಚು ಸೋಂಕಿತರು ಕಾಣಿಸಿಕೊಂಡಿರುವ ಪ್ರದೇಶವಾಗಿದೆ. ಶನಿವಾರ ಹೊಸದಾಗಿ 14 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಶಿವಾಜಿನಗರದ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. 
ಶಿವಾಜಿನಗರ ಮಾರುಕಟ್ಟೆ
ಶಿವಾಜಿನಗರ ಮಾರುಕಟ್ಟೆ

ಬೆಂಗಳೂರು: ಪಾದರಾಯನಪುರ, ಹೊಂಗಸಂದ್ರದ ಬಳಿಕ ಇದೀಗ ಶಿವಾಜಿನಗರ ಅತ್ಯಂತ ಹೆಚ್ಚು ಸೋಂಕಿತರು ಕಾಣಿಸಿಕೊಂಡಿರುವ ಪ್ರದೇಶವಾಗಿದೆ. ಶನಿವಾರ ಹೊಸದಾಗಿ 14 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಶಿವಾಜಿನಗರದ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. 

ಕ್ವೀನ್ಸ್ ರಸ್ತೆಯಲ್ಲಿರುವ ಶಿಫಾ ಆಸ್ಪತ್ರೆಯ 34 ವರ್ಷದ ಹೊಸ್ ಕೀಪಿಂಗ್ ಸಿಬ್ಬಂದಿಯಲ್ಲಿ (653ನೇ ಸೋಂಕಿತ) ಸೋಂಕು ದೃಢಪಟ್ಟಿದೆ. ಆದನಿಂದ ಇದೀಗ ಶಿವಾಜಿನಗರದ 30 ಮಂದಿಗೆ ಸೋಂಕು ಹರಡಿದೆ. 

ಹೌಸ್ ಕೀಪಿಂಗ್ ಸಿಬ್ಬಂದಿ ಜೊತೆಗೆ ಸಂಪರ್ಕದಲ್ಲಿದ್ದ ಒಟ್ಟು 105 ಮಂದಿ ಸಂಪರ್ಕಿತರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅದರಲ್ಲಿ ಮೇ.8 ರಂದು 4 ಮಂದಿಗೆ ಸೋಂಕು ದೃಢಪಟ್ಟಿತ್ತು. ಬಳಿಕ ಶುಕ್ರವಾರ 11 ಮಂದಿಗೆ ಸೋಂಕು ಉಂಟಾಗಿದ್ದು, ಶನಿವಾರ ಮತ್ತೆ 14 ಮಂದಿಗೆ ಸೋಂಕು ದೃಢಪಟ್ಟಿದೆ. 

ಸೋಂಕಿತ ಹೌಸ್ ಕೀಪಿಂಗ್ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 14 ಮತ್ತು ಪರೋಕ್ಷ ಸಂಪರ್ಕಿತ 91 ಜನರನ್ನು ಹಂತ ಹಂತವಾಗಿ ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಶನಿವಾರ ಮತ್ತೆ 20 ಮಂದಿಯನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. ಒಂದೇ ಕಟ್ಟಡದಲ್ಲಿ ಇರುವವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ, ರ್ಯಾಂಡಮ್ ಪದ್ಧತಿಯಲ್ಲಿ ಇತರರನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com