ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿ: ಸಿಎಂ ಗೆ ಶಾಸಕ ಹ್ಯಾರಿಸ್ ಮನವಿ
ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ಹ್ಯಾರಿ ಪತ್ರ ಬರೆದಿದ್ದಾರೆ. ಮುಸ್ಲಿಂ ಬಾಂಧವರು ಚಂದ್ರ ದರ್ಶನ ನಂತರ ಮೇ 24 ಅಥವಾ 25ರಂದು ಈದುರ್ ಫಿತರ್/ ರಂಜಾನ್ ಹಬ್ಬವನ್ನು ಆಚರಿಸುತ್ತಿದ್ದಾರೆ.
Published: 18th May 2020 08:18 AM | Last Updated: 18th May 2020 12:17 PM | A+A A-

ಹ್ಯಾರಿಸ್
ಬೆಂಗಳೂರು: ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ಹ್ಯಾರಿ ಪತ್ರ ಬರೆದಿದ್ದಾರೆ. ಮುಸ್ಲಿಂ ಬಾಂಧವರು ಚಂದ್ರ ದರ್ಶನ ನಂತರ ಮೇ 24 ಅಥವಾ 25ರಂದು ಈದುರ್ ಫಿತರ್/ ರಂಜಾನ್ ಹಬ್ಬವನ್ನು ಆಚರಿಸುತ್ತಿದ್ದಾರೆ.
ರಂಜಾನ್ ಹಬ್ಬದ ದಿನದಂದು ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಮಾಡುತ್ತಾರೆ. ಹೀಗಾಗಿ ಈದ್ಗಾ ಮೈದಾನಗಳಲ್ಲಿ ಅಥವಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡಬೇಕು ಎಂದು ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ.
ತಜ್ಞರು ಮತ್ತು ವೈದ್ಯರ ಸಲಹೆಯನ್ನು ಪಡೆದು ಪರಿಸ್ಥಿತಿ ಅನುಕೂಲಕರವಾಗಿದ್ದರೆ ಮಾತ್ರ ರಂಜಾನ್ ದಿನದಂದು ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಸಿಎಂ ಇಬ್ರಾಹಿಂ ಅವರ ಪತ್ರಕ್ಕೆ ಕಾಂಗ್ರೆಸ್‍ನ ಮುಸ್ಲಿಂ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಿದ್ದರೂ ಶಾಸಕ ಹ್ಯಾರಿಸ್ ಅವರು ಸಾಮೂಹಿಕ ಪ್ರಾರ್ಥನೆಗೆ ಪತ್ರ ಬರೆದಿರುವುದು ಚರ್ಚೆಗೆ ಕಾರಣವಾಗಿದೆ.