ಬಳ್ಳಾರಿಯಲ್ಲಿ ಕೊರೋನಾ ಸೋಂಕು ಪೀಡಿತ ವ್ಯಕ್ತಿ ಸಾವು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಮಾಹಿತಿ

ಗಡಿ ಜಿಲ್ಲೆ ಬಳ್ಳಾರಿಯಲ್ಲಿ ಕೊರೋನಾ ವೈರಸ್ ಸೋಂಕು ಪೀಡಿತ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾಧಿಕಾರಿ ಎಸ್ ನಕುಲ್ ಮಾಹಿತಿ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಳ್ಳಾರಿ: ಗಡಿ ಜಿಲ್ಲೆ ಬಳ್ಳಾರಿಯಲ್ಲಿ ಕೊರೋನಾ ವೈರಸ್ ಸೋಂಕು ಪೀಡಿತ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾಧಿಕಾರಿ ಎಸ್ ನಕುಲ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಕುಲ್ ಅವರು, ಬಳ್ಳಾರಿ ಜಿಲ್ಲೆಯ ಸತ್ಯನಾರಾಯಣಪೇಟೆಯ ಕೋವಿಡ್-19 ಸೋಂಕು ಪೀಡಿತ ವ್ಯಕ್ತಿ (61 ವರ್ಷ) ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮೇ 4ರಂದು ಬಳ್ಳಾರಿಗೆ  ವಾಪಸಾಗಿದ್ದ ಅವರು ಉಸಿರಾಟದ ಸಮಸ್ಯೆಯಿಂದ ವಿಮ್ಸ್‌ಗೆ ದಾಖಲಾಗಿದ್ದರು. ಮೇ 17 ರಂದು ಸೋಂಕಿರುವುದು ಪತ್ತೆಯಾಗಿತ್ತು ಎಂದು ಹೇಳಿದ್ದಾರೆ. 

ಸಾವಿಗೂ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಸಾವಿನ ಸುದ್ದಿ
ಇನ್ನು ಸೋಂಕು ಪೀಡಿತ ವ್ಯಕ್ತಿ ಆಸ್ಪತ್ರೆಯಲ್ಲಿರುವಂತೆಯೇ ನಿನ್ನೆ ಅಂದರೆ ಸೋಮವಾರ ಸಂಜೆಯೇ ಕೆಲ ಕಿಡಿಗೇಡಿಗಳು ವೃದ್ಧನ ಸಾವಿನ ಕುರಿತು ಗಾಳಿ ಸುದ್ದಿ ಹಬ್ಬಿಸಿದ್ದರು. ವಾಟ್ಸ್‌ಅಪ್ ಗ್ರೂಪ್‌ಗಳಲ್ಲೂ ಹರಿದಾಡಿತ್ತು ಕೊರೋನಾ ಸೋಂಕು ಪೀಡಿತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿತ್ತು.  ಆದರೆ ಸೋಮವಾರ ರಾತ್ರಿಯೂ‌ ಅವರ ಆರೋಗ್ಯ ಸ್ಥಿರವಾಗಿತ್ತು. ಆದರೆ ಬೆಳಗಿನ ಜಾವ 5ರ ವೇಳೆಗೆ ಮೃತಪಟ್ಟರು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ ಗರಿಷ್ಠ 99 ಹೊಸ ಪ್ರಕರಣಗಳು ದಾಖಲಾಗಿವೆ. ಇನ್ನು ಅಂತೆಯೇ ಈವರೆಗೆ 37 ಮಂದಿ ಸೋಂಕಿತರು ಮೃತಪಟ್ಟಿದ್ದು, 530 ಮಂದಿ ಗುಣಮುಖರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com