ಕೇಂದ್ರ ಸರ್ಕಾರದ ಕೋವಿಡ್-19 ಆರ್ಥಿಕ ಪ್ಯಾಕೇಜ್ ಪಾರದರ್ಶಕವಾಗಿಲ್ಲ: ಎಚ್ ಡಿ ಕುಮಾರಸ್ವಾಮಿ ಕಿಡಿ

ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಕೊರೋನಾ ವೈರಸ್ ಆರ್ಥಿಕ ಪ್ಯಾಕೇಜ್ ಪಾರದರ್ಶಕವಾಗಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಕಿಡಿಕಾರಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು; ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಕೊರೋನಾ ವೈರಸ್ ಆರ್ಥಿಕ ಪ್ಯಾಕೇಜ್ ಪಾರದರ್ಶಕವಾಗಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೊರೋನಾವೈರಸ್ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವವರಿಗೆ ನೆರವು ನೀಡಲು ಕೇಂದ್ರ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ನಲ್ಲಿ ಪಾರದರ್ಶಕತೆಯ ಕೊರತೆ ಇದೆ. ಈ ಘೋಷಣೆಗಳನ್ನು ಟೀಕಿಸಿದರೆ  ದೇಶದ್ರೋಹಿಗಳೆಂದು ಬಿಂಬಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವೇಚ್ಚಾಚಾರದಿಂದ ಪ್ಯಾಕೇಜ್‌ಗಳನ್ನು ಘೋಷಿಸಿದ್ದು, ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಹಲವು ತಜ್ಞರು ಸಲಹೆ ನೀಡುತ್ತಾರೆ. ಈ ಸಲಹೆಗಳ ಆಧಾರದ ಮೇಲೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ.  ಯಾವ ತಜ್ಞರಿಂದ ಮಾಹಿತಿ ಪಡೆದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ಯಾಕೇಜ್‌ ಘೋಷಣೆ ಮಾಡಿದ್ದಾರೊ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪರಿಹಾರ ಸಾಲವಲ್ಲ
ಇದೇ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಿಡಿಕಾರಿದ ಅವರು, ಪರಿಹಾರ ಕೊಡುವುದು ಅಂದರೆ ಸಾಲ ನೀಡುವುದಲ್ಲ. ಆರೂವರೆ ಲಕ್ಷ ಕೋಟಿ ಮೊತ್ತ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಎರಡೂವರೆ ಸಾವಿರ ಕೋಟಿ  ಮಾತ್ರ. ಇಂಥ ಪ್ಯಾಕೇಜ್ ನಿಂದ ಆರ್ಥಿಕ ಚೇತರಿಕೆ ಕಾಣಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಅಂತೆಯೇ ನೋಟು ರದ್ಧತಿಯ ಬಳಿಕ ಸಣ್ಣ ಉದ್ಯಮ ನೆಲಕಚ್ಚಿತ್ತು. ಸಂಸ್ಥೆಗಳು ಆರ್ಥಿಕ ದಿವಾಳಿತನಕ್ಕೆ ಒಳಗಾಗಿವೆ. ಉದ್ಯಮಗಳ ದಿವಾಳಿತನದಿಂದ ಬ್ಯಾಂಕುಗಳು ಆರ್ಥಿಕವಾಗಿ ಕುಸಿತ  ಕಂಡಿವೆ. ಇದನ್ನು ಸರಿಪಡಿಸಲು ಈ ಪ್ಯಾಕೇಜ್ ಘೋಷಿಸಿದ್ದಾರೆ. ಇದರಿಂದ ಸಣ್ಣ ಉದ್ಯಮಗಳಿಗೆ ಉತ್ತೇಜನ ನೀಡಲು ಅಲ್ಲ. 45 ಲಕ್ಷ ಎಂಎಸ್ಎಂಇಗಳಿಗೆ ಕೇಂದ್ರ ಪ್ಯಾಕೇಜ್ ಮಾಡಿದೆ. ಇದು ಜಿಡಿಪಿಯಲ್ಲಿ ಶೇ.1ರಷ್ಟು ಮಾತ್ರ ಅಷ್ಟೇ .ಈ ಪ್ಯಾಕೇಜ್‌ ಎಂಎಸ್ಎಂಇಗಳಿಗೆ ದೊಡ್ಡ ಮಟ್ಟದ  ನೆರವಿಗೆ ಬರುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಸಾಂಕ್ರಾಮಿಕ ರೋಗದಿಂದ ಪಾರಾಗುವ ನಿಟ್ಟಿನಲ್ಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹೊಣೆಗಾರಿಕೆ ಏನು ಪ್ರಶ್ನಿಸಿದ ಕುಮಾರಸ್ವಾಮಿ ಅವರು, ಕೊರೊನಾದಿಂದ ಜಿಡಿಪಿ ಕುಸಿತದ ಬಗ್ಗೆ ಒಂದೊಂದು ಸಂಸ್ಥೆ ಒಂದೊಂದು ಅಂಕಿ ಸಂಖ್ಯೆ ನೀಡುತ್ತಿವೆ. ಹೀಗಾಗಿ ಜಿಡಿಪಿಯ  ಕುರಿತು ಶ್ವೇತ ಪತ್ರ ಹೊರಡಿಸಬೇಕು. ಟಿಡಿಎಸ್ ಶೇ 25ರಷ್ಟು ಕಡಿತಗೊಳಿಸಲಾಗಿದೆ ಎಂದಿದ್ದಾರೆ. ಯಾವ ವ್ಯಕ್ತಿ ತೆರಿಗೆ ಕಟ್ಟುತ್ತಾರೋ, ಅವರು ಸೇವಾ ತೆರಿಗೆ ಕಟ್ಟಲೇಬೇಕು. ಟಿಡಿಎಸ್ ಮುಂದಿನ ದಿನಗಳಲ್ಲಿ ಕಟ್ಟಲೇಬೇಕು. ಟಿಡಿಎಸ್ ಹಣ ಯಾವ ಕಾರಣಕ್ಕೆ ಇಟ್ಟುಕೊಂಡಿದ್ದಾರೊ.‌ ಇದಕ್ಕೆ  ಹಣಕಾಸು ಸಚಿವರೇ ಉತ್ತರಿಸಬೇಕು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com