ಆನ್‌ಲೈನ್‌ ಪಾಠದ ಜತೆಗೆ ಪುನರಾವರ್ತನೆ ತರಗತಿಗೆ ಚಿಂತನೆ: ಡಾ. ಅಶ್ವತ್ಥನಾರಾಯಣ

ಆನ್‌ಲೈನ್ ತರಗತಿಗಳ ಜತೆಗೆ ಪುನರಾವರ್ತನೆ ತರಗತಿ ನಡೆಸಲು ಚಿಂತಿಸಲಾಗಿದ್ದು, ನಿರಾತಂಕವಾಗಿ ಪರೀಕ್ಷೆ ಬರೆಯಿರಿ ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಧೈರ್ಯ ತುಂಬಿದರು.
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ

ಬೆಂಗಳೂರು: ಆನ್‌ಲೈನ್ ತರಗತಿಗಳ ಜತೆಗೆ ಪುನರಾವರ್ತನೆ ತರಗತಿ ನಡೆಸಲು ಚಿಂತಿಸಲಾಗಿದ್ದು, ನಿರಾತಂಕವಾಗಿ ಪರೀಕ್ಷೆ ಬರೆಯಿರಿ ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಧೈರ್ಯ ತುಂಬಿದರು.

ಕಾಲೇಜು ವಿದ್ಯಾರ್ಥಿಗಳಿಗಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಮಂಗಳವಾರ ಆಯೋಜಿಸಿದ್ದ ಫೇಸ್‌ಬುಕ್‌ ಲೈವ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಪಮುಖ್ಯಮಂತ್ರಿ, ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿ ಗೊಂದಲ ನಿವಾರಿಸಿದರು.

ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಆನ್‌ಲೈನ್‌ ತರಗತಿಯಿಂದ ವಂಚಿತರಾಗಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕ್ರ್ಯಾಶ್‌ ಕೋರ್ಸ್‌ ನಡೆಸಬೇಕು ಎಂಬ ಬೇಡಿಕೆಗೆ ಸ್ಪಂದಿಸಿದ ಉನ್ನತ ಶಿಕ್ಷಣ ಸಚಿವರು, “ಈ ಬೇಡಿಕೆಯನ್ನು ಪರಗಣಿಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು,” ಎಂದರು.

“ಆನ್‌ಲೈನ್‌ ತರಗತಿಗಳ ಬಗ್ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಹಲವರಿಂದ ಅಸಮಾಧಾನವೂ ವ್ಯಕ್ತವಾಗಿದೆ. ಕೊವಿಡ್‌ನಿಂದಾಗಿ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳಬಾರದು ಎಂಬ ಉದ್ದೇಶಕ್ಕೆ ಆನ್‌ಲೈನ್‌ ತರಗತಿಗಳನ್ನು ಆರಂಭಿಸಲಾಗಿದೆ. ಯೂಟ್ಯೂಬ್‌, ಆ್ಯಪ್‌, ವೆಬ್‌ಸೈಟ್‌, ವಾಟ್ಸಪ್‌ ಸೇರಿದಂತೆ ಹಲವಾರು ಆನ್‌ಲೈನ್‌ ವೇದಿಕೆ ಮೂಲಕ ಪಾಠ ಪ್ರವಚನ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com