ಸೋನಿಯಾ ವಿರುದ್ಧದ ಎಫ್ಐಆರ್ ರದ್ದು ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂಗೆ ಕಾಂಗ್ರೆಸ್ ಮನವಿ

ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ ವಾಪಸ್ ಪಡೆಯಬೇಕು ಹಾಗು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ ವಾಪಸ್ ಪಡೆಯಬೇಕು ಹಾಗು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.

ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿದಂತೆ ಪ್ರಮುಖ ನಾಯಕರು ಸಾಥ್ ನೀಡಿದ್ದರು‌ ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ಕೈಬಿಡಬೇಕು, ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಆಗ್ರಹಿಸಿತು.

ಮುಖ್ಯಮಂತ್ರಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಿವಮೊಗ್ಗದ ಪ್ರವೀಣ್ ಕುಮಾರ್ ಎಂಬ ವಕೀಲ, ಪೊಲೀಸ್ ಅಧಿಕಾರಿಯೊಬ್ಬರ ಜೊತೆ ಸೇರಿ ಒಂದು ದೂರು ಕೊಟ್ಟು ಸೋನಿಯಾಗಾಂಧಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ, ಇದು ಸೂಕ್ಷ್ಮ ವಿಚಾರ. ಇಡೀ ದೇಶದಲ್ಲೇ ಸಂಚಲವನ್ನು ಉಂಟುಮಾಡುವ ವಿಚಾರವಾಗಿದೆ. ದ್ವೇಷದ ಮನೋಭಾವ, ಅಧಿಕಾರ ದುರುಪಯೋಗದಿಂದ ಇದು ನಡೆದಿದೆ ಎಂದು ಹರಿಹಾಯ್ದರು.

ವಿರೋಧ ಪಕ್ಷಗಳು ಯಾವ ಮಟ್ಟಕ್ಕೆ ಕೆಲಸ ಮಾಡಬೇಕು ಎನ್ನುವ ದೊಡ್ಡ ಚರ್ಚೆ ಕೂಡ ನಾವು ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಾವು ಗೃಹ ಸಚಿವರ ಜತೆ ಮಾತನಾಡಿದ್ದು ಈಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ ಎಂದರು. ಇದು ಸೂಕ್ಷ್ಮ ವಿಚಾರ ಹಾಗಾಗಿ ನಾವು ಹೋರಾಟ ಮಾಡುವ ಮೊದಲು ನಮ್ಮ ಪಕ್ಷದ ಪರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ, ಕೂಡಲೇ ಈ ಸಂಬಂಧ ಕ್ರಮಕೈಗೊಳ್ಳಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇವೆ. 

ಇದಕ್ಕೆ 24 ಗಂಟೆಯಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗುತ್ತದೆ. ಅಗತ್ಯ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ಒಂದು ನಿಮಿಷದ ಚರ್ಚೆಗೂ ಅವಕಾಶ ನೀಡದೆ ನಮಗೆ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com