ಕೊರೋನಾ ಎಫೆಕ್ಟ್: ಬಂಡವಾಳ ಹೂಡಿಕೆದಾರರ ಸಮಾವೇಶ ಮುಂದೂಡಿಕೆ

ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಬಂಡವಾಳ ಹೂಡಿಕೆದಾರರ ಸಮಾವೇಶ (ಜಿಮ್)ನ್ನು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. 
ಸಚಿವ ಜಗದೀಶ್ ಶೆಟ್ಟರ್
ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಬಂಡವಾಳ ಹೂಡಿಕೆದಾರರ ಸಮಾವೇಶ (ಜಿಮ್)ನ್ನು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. 

ನವೆಂಬರ್ 3ರಿಂದ ಮೂರು ದಿನಗಳ ಕಾಲ ನಡೆಸಲು ಉದ್ದೇಶಿಸಲಾಗಿದ್ದ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಮುಂದಿನ ವರ್ಷದ ಜೂನ್ ಅಥವಾ ಜುಲೈ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ. 

ಕೊರೋನಾ ನಿಯಂತ್ರಣ ಸಂಬಂಧ ಲಾಕ್'ಡೌನ್ ಜಾರಿಯಿಂದಾಗಿ ಆರ್ಥಿಕ ಸಂಕಷ್ಟ ಮತ್ತು ಸಮರ್ಪಕವಾದ ಸಿದ್ಧತೆ ಕೈಗೊಳ್ಳಲಾಗದ ಕಾರಣಕ್ಕಾಗಿ ಸಮಾವೇಶವನ್ನು ಮೂಂದೂಡಲು ನಿರ್ಧರಿಸಲಾಗಿದೆ. ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಯಶಸ್ವಿಯಾಗಿ ನಡೆಸಲು ಕನಿಷ್ಟ 6 ತಿಂಗಳು ಸಿದ್ಧತೆಯ ಅಗತ್ಯವಿದೆ. ಆದರೆ, ಕಳೆದ ಎರಡೂವರೆ ತಿಂಗಲಿನಿಂದ ಲಾಕ್'ಡೌನ್ ಜಾರಿಯಲ್ಲಿರುವ ಕಾರಣ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ದೇಶದ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಹೂಡಿಕೆದಾರರನ್ನು ಆಹ್ವಾನಿಸುವುದು ಸೇರಿದಂತೆ ಹಲವು ಸಿದ್ಧತೆ ಕಾರ್ಯಗಳನ್ನು ಕೈಗೊಲ್ಲಬೇಕು. ಈ ಹಿನ್ನಲೆಯಲ್ಲಿ ಜಿಮ್ ಮುಂದೂಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಕೋವಿಡ್-19 ಕಾರಣಕ್ಕಾಗಿ ದೇಶ ಹಾಗೂ ವಿದೇಶಗಳಿಂದ ಐಟಿ ಪ್ರತಿನಿಧಿಗಳು ಬರುವುದು ಕಷ್ಟವಾಗಲಿದೆ ಎನ್ನುವ ಕಾರಣಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿ ಟೆಕ್ ಸಮ್ಮೇಳನ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com