ಅಸಂಘಟಿಕ ಕಾರ್ಮಿಕರ ನೋಂದಾವಣಿಗೆ ಅಭಿಯಾನ ಆರಂಭಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪ್ರಸ್ತುತ ಕೇವಲ 89 ಸಾವಿರ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಈ ವಲಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಭಿಯಾನದ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪ್ರಸ್ತುತ ಕೇವಲ 89 ಸಾವಿರ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಈ ವಲಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಭಿಯಾನದ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ, ಎಂಎಸ್ಎಂಇ ಹಾಗೂ ಸಕ್ಕರೆ ಮತ್ತು ಕಾರ್ಮಿಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. 

ಈ ವೇಳೆ ಮಾತನಾಡಿರುವ ಅವರು, ರಾಜ್ಯದಲ್ಲಿ ಅಸಂಘಟಿಕ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪ್ರಸ್ತುತ ಕೇವಲ 89,000 ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಈ ವಲಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಭಿಯಾನದ ಮಾದರಿಯಲ್ಲಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. 

ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಸದಿದ್ದರೆ, ಕಾರ್ಮಿಕರಿಗೆ ಸಿಗಬೇಕಾದ ಪರಿಹಾರ ಧನವೂ ಸೇರಿ ಹಲವು ರೀತಿಯ ಪ್ರಯೋಜನಗಳಿಂದ ವಂಚಿತರಾಗಬಹುದು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ನೋಂದಾಯಿಸುವ ಕಾರ್ಯಕೈಗೊಳ್ಳಬೇಕೆಂದು ತಿಳಿಸಿದ್ದಾರೆ. 

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ, ಕಟ್ಟಣ ನಿರ್ಮಾಣ ಕಾರ್ಮಿಕರು, ತೋಟಗಾರಿಕೆ ಕಾರ್ಮಿಕರು, ಬಡಗಿಗಳು ಮತ್ತು ಕ್ಷೌರಿಕರು ಲಾಕ್'ಡೌನ್ ಬಳಿಕ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳದ ಕಾರಣ, ಸರ್ಕಾರ ನೀಡುತ್ತಿರುವ ಪರಿಹಾರಗಳು ಅವರಿಗೆ ತಲುಪುತ್ತಿಲ್ಲ. ನೋಂದಾವಣಿ ಮಾಡಿಕೊಳ್ಳುವುದರಿಂದ ಭವಿಷ್ಯದಲ್ಲಿ ಇಂತಹವರನ್ನು ರಕ್ಷಣೆ ಮಾಡಲು ಸಹಾಯವಾಗುತ್ತದೆ ಎಂದಿದ್ದಾರೆ. 

ಈ ವರೆಗೂ 12.40 ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ರೂ.5,000 ಪರಿಹಾರವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ಇದೇ ವೇಳೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com