ವಿವಿಧ ದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 504 ಪ್ರಯಾಣಿಕರು

ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾವಿನವರೆಗೆ ವಿವಿಧ ದೇಶಗಳಿಂದ 504 ಭಾರತೀಯರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾವಿನವರೆಗೆ ವಿವಿಧ ದೇಶಗಳಿಂದ 504 ಭಾರತೀಯರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಇಂಡೋನೇಷ್ಯಾದ ಜರ್ಕಾತದಿಂದ ಶನಿವಾರ ಬೆಳಗಿನ ಜಾವ 1.40ರ ವೇಳೆಗೆ ದೇವನಹಳ್ಳಿಯ ಬಿಐಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹನ್ನೆರಡನೆಯ ವಿಮಾನದಲ್ಲಿ 214 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ಇವರನ್ನು ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಇವರೆಲ್ಲರನ್ನೂ 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com