ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳು ಮತ್ತಷ್ಟು ಹೆಚ್ಚಲಿವೆ: ಬಿಬಿಎಂಪಿ ಅಧಿಕಾರಿಗಳು

ಲಾಕ್ ಡೌನ್ ಸಡಿಲಿಸಿದ ನಂತರ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಗಳು ಮತ್ತಷ್ಚು ಹೆಚ್ಚಾಗಲಿವೆ, ಜನರು ಸಾಮಾಜಿಕ ದೂರ ಮತ್ತು ಇತರ ಮಾನದಂಡಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರಕರಣಗಳು ಮತ್ತಷ್ಟು ಹೆಚ್ಚಾಗಬಹುದು ಎಂದು  ಆರೋಗ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ

Published: 23rd May 2020 12:03 PM  |   Last Updated: 23rd May 2020 12:03 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೆಂಗಳೂರು: ಲಾಕ್ ಡೌನ್ ಸಡಿಲಿಸಿದ ನಂತರ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಗಳು ಮತ್ತಷ್ಚು ಹೆಚ್ಚಾಗಲಿವೆ, ಜನರು ಸಾಮಾಜಿಕ ದೂರ ಮತ್ತು ಇತರ ಮಾನದಂಡಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರಕರಣಗಳು ಮತ್ತಷ್ಟು ಹೆಚ್ಚಾಗಬಹುದು ಎಂದು  ಆರೋಗ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಪ್ರಕರಣಗಳು ಹೆಚ್ಚಾದ ಪ್ರದೇಶಗಳನ್ನು ಸೀಲ್ ಡೌನ್ ಮಾಡುವುದು ಸವಾಲಿನ ಸಂಗತಿ, ಕೇವಲ ವಲಸೆ ಕಾರ್ಮಿಕರಿಂದ ಸೋಂಕು ಹೆಚ್ಚುವುದಿಲ್ಲ ಸ್ಥಳೀಯರಿಂದಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಸೋಂಕಿತರ ಸಂಪರ್ಕ ಪತ್ತೆಹಚ್ಚಲು ಬಿಬಿಎಂಪಿ ಸಿಬ್ಬಂದಿ ತೀವ್ರವಾಗಿ ಕೆಲಸ ಮಾಡುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯಕ್ತ ರವಿಕುಮಾರ್ ಸುರ್ ಪುರ ತಿಳಿಸಿದ್ದಾರೆ.

ಜನರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು, ಸದ್ಯ ಸಮುದಾಯ ಹಂತದಲ್ಲಿ ಪ್ರಕರಣ ಹಬ್ಬಿಲ್ಲ, ಮುಂದೆಯೂ ಹಬ್ಬಬಾರದು ಎಂದಾದರೇ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ಸಂಪೂರ್ಣ ಅಪಾರ್ಟ್ಮೆಂಟ್ ಸಂಕೀರ್ಣವನ್ನು ಮುಚ್ಚುವ ಬದಲು, ನಿರ್ದಿಷ್ಟ ಮಹಡಿ ಮತ್ತು ಕೆಳಗಿನದನ್ನು ಮಾತ್ರ ಮೊಹರು ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ. 

ಪರಿಸ್ಥಿತಿನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ  ಜನರೇ ಸಲಹೆ ಮತ್ತು ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ. ಈ ಮೊದಲು ಒಂದೇ ಒಂದು ಕೊರೋನಾ ಪಾಸಿಟಿವ್ ಪ್ರಕರಣಗಳು ಇರದಿದ್ದ ಪ್ರದೇಶಗಗಳಲ್ಲೂ ಕೂಡ ಕೊರೋನಾ ಪ್ರಕರಣ  ಪತ್ತೆಯಾಗುತ್ತಿವೆ, ವಲಯವಾರು ಸಮೀಕ್ಷೆ ಬಗ್ಗೆ  ಬಿಬಿಎಂಪಿ ಹೆಚ್ಚಿನ ಗಮನ ಹರಿಸುತ್ತಿದೆ ಎಂದು ತಿಳಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp