ಯುವಕನ ಆತ್ಮಹತ್ಯೆ ಕೇಸ್: ಶೋಭಾ ಕರಂದ್ಲಾಜೆ ಟ್ವೀಟ್ ವೈರಲ್; ಯುಟಿ ಖಾದರ್ ಲೇವಡಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಮಾಡಿದ್ದ ಟ್ವೀಟ್ ವೈರಲ್ ಆಗಿದೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಮಾಡಿದ್ದ ಟ್ವೀಟ್ ವೈರಲ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಕಲ್ಲಡ್ಕ ಸಮೀಪದ ಕೊಳಕೀರು ನಿವಾಸಿ ನಿಶಾಂತ್ ಹಾರಿದ್ದ. ನಿಶಾಂತ್ ಹಾರಿದ್ದನ್ನು ನೋಡಿ ರಂಜಾನ್ ಹಬ್ಬದ ಸಡಗರದಲ್ಲಿದ್ದ ಮುಸ್ಲಿಂ ಯುವಕರು ರಕ್ಷಿಸಿದ್ದರು, ನದಿಗೆ ಜಿಗಿದು ಆತನನ್ನು ಮೇಲೆ ತಂದು ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವ ಪ್ರಯತ್ನ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಶಾಂತ್ ಸಾವನ್ನಪ್ಪಿದ್ದ.

ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿರುವ ಸಮಯದಲ್ಲೇ ಕಿಡಿಗೇಡಿಗಳು ಶೋಭಾ ಕರಂದ್ಲಾಜೆ ಅವರೇ ಟ್ವೀಟ್ ಮಾಡಿದಂತೆ ಸಾಲನ್ನು ಎಡಿಟ್ ಮಾಡಿದ್ದರು. “ಜಿಹಾದಿ ಹಿಂದೂ ಸಂಘಟನೆಯಿಂದ ಕಲ್ಲಡ್ಕದ ನಿಶಾಂತ್ ಎಂಬ ಯುವಕನ ಹತ್ಯೆ ನಡೆದಿದೆ ಎಂಬ ಮಾಹಿತಿ ಬಂದಿದೆ. ಕೂಡಲೇ ಆ ಜಿಹಾದಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ” ಎಂದು ಈ ನಕಲಿ ಟ್ವೀಟ್ ನಲ್ಲಿ ಬರೆಯಲಾಗಿತ್ತು. 

ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಸಂಸದೆ, ನನ್ನ ಹೆಸರಿನಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿ, ಸಮಾಜದ ಸ್ವಾಸ್ಥ್ಯ-ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಮತಾಂಧ ಜಿಹಾದಿಗಳ ಈ ದುಷ್ಕೃತ್ಯಕ್ಕೆ ಕಾಂಗ್ರೆಸ್ ನಾಯಕರು ಸೇರಿಕೊಂಡಿರುವುದು ಅವರ ವಿಕೃತ ಮನಸ್ಥಿತಿಯನ್ನು ತೆರೆದಿಡುತ್ತದೆ. ಈ ರೀತಿಯ ಫೇಕ್ ನ್ಯೂಸ್ ಗಳ ಮೂಲಕ ಸಮಾಜದ ಸಾಮರಸ್ಯ ಕದಡುತ್ತಿರುವ ಎಲ್ಲಾ ಸಮಾಜ ವಿರೋಧಿಗಳಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Not even an ounce of sancity left in congress!!

At any cost @INCIndia wnts d communities in the society to be divided.

INC leader @utkhader tweets an edited tweet in my name with a motive of disturbing social harmony.

Askd @compolmlr to book charges against #FakeNews Peddlers. pic.twitter.com/P6QBwI0ErG

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com