14 ಪೊಲೀಸರಿಗೆ ಕೊರೋನಾ ಸೋಂಕು: ಎಚ್ಚೆತ್ತ ಗೃಹ ಇಲಾಖೆಯಿಂದ ಪಿಪಿಇ ಕಿಟ್

14 ಪೊಲೀಸರಿಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಗೃಹ ಇಲಾಖೆಗೆ ಹೊಸ ಸವಾಲು ಎದುರಾಗಿದೆ, ಈ 14 ಪೊಲೀಸರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 585 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 14 ಪೊಲೀಸರಿಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಗೃಹ ಇಲಾಖೆಗೆ ಹೊಸ ಸವಾಲು ಎದುರಾಗಿದೆ, ಈ 14 ಪೊಲೀಸರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 585 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ನಾಲ್ಕು ಪೊಲೀಸ್ ಕುಟುಂಬ ಸದಸ್ಯರು ಮತ್ತು ಪೊಲೀಸರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 134 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ದಕ್ಷಿಣ ಕನ್ನಡದಲ್ಲಿ ಮೂರು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಲಾಕ್ ಡೌನ್ ಆರಂಭವಾದಾಗಿನಿಂದ ಪೊಲೀಸರು ಕಂಟೈನ್ಮೆಂಟ್ ಜೋನ್ ಮತ್ತು ಅಪಾಯದ ವಲಯಗಳಲ್ಲಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ, ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿದ್ದಾರೆ. ‘ಚೆಕ್‌ಪೋಸ್ಟ್‌ಗಳು ಮತ್ತು ಕಂಟೈನ್‌ಮೆಂಟ್‌ ‌ವಲಯಗಳಲ್ಲಿ ಕೆಲಸ ಮಾಡುವ ಪೊಲೀಸ್‌ ಸಿಬ್ಬಂದಿ ಮತ್ತು ಅವರ ಸಂಬಂಧಿಕರಿಗೆ ಕಡ್ಡಾಯವಾಗಿ ಕೋವಿಡ್‌ 19 ಪರೀಕ್ಷೆ ಮಾಡಬೇಕು.  ಅಲ್ಲದೆ, ಸಿಬ್ಬಂದಿಗೆ ಹತ್ತಿಯ ಕೈಗವಸು, ಮಾಸ್ಕ್‌, ವೈಪರ್‌ ಸಹಿತ ಹೆಡ್‌ವೈಸರ್‌, ಪಿಪಿಇ ಕಿಟ್‌ ನೀಡಬೇಕು’ ಎಂದೂ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ. 

ಗಡಿಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸ್‌ ಸಿಬ್ಬಂದಿಗೆ ಪಾಳಿ ವ್ಯವಸ್ಥೆ ಮಾಡಬೇಕು. ಸಂಚಾರ ನಿಯಂತ್ರಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಜಾಕೆಟ್‌, ಮಾಸ್ಕ್‌, ಹೆಡ್‌ವೈಪರ್‌, ಕೈಗವಸು ನೀಡಬೇಕು. ಪೊಲೀಸ್‌ ಠಾಣೆ ಮತ್ತು ಪೊಲೀಸ್‌ ಕಾಲೊನಿಗಳಲ್ಲಿ ಸ್ವಚ್ಛತೆ ಕಾಪಾಡಲು ಆಗಾಗ ಫ್ಯೂಮಿಗೇಷನ್‌ ಮಾಡಬೇಕು. ಜೊತೆಗೆ ರ‍್ಯಾಂಡಮ್‌ ಆಗಿ ಕೋವಿಡ್‌
ತಪಾಸಣೆ ನಡೆಸಬೇಕು’ ಎಂದು ಸಚಿವರು ಸೂಚಿಸಿದ್ದಾರೆ. ‘

‘ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಸಿಬ್ಬಂದಿ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಅವರ ಮನೋಬಲ ಹೆಚ್ಚಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದೂ  ಹಿರಿಯ ಅಧಿಕಾರಿಗಳಿಗೆ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ಹೊರರಾಜ್ಯಗಳಿಂದ ಬರುವ ವಲಸಿಗರು ರಾಜ್ಯದ ಗಡಿಯೊಳಗೆ ನುಸುಳದಂತೆ ತಡೆಯುವ ನಿಟ್ಟಿನಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸ್‌ ಸಿಬ್ಬಂದಿಗೆ ಸೌಲಭ್ಯ ಒದಗಿಸಲು ಆರು ಗಡಿಗಳಲ್ಲಿ ಮೊಬೈಲ್‌ ವಿಶ್ರಾಂತಿ ಕೊಠಡಿಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com