'ದೇಶದಲ್ಲಿ ಕೊರೋನಾ ವೈರಸ್ ಹಬ್ಬಿಸಿ' ಎಂದು ಪೋಸ್ಟ್ ಹಾಕಿದ ಟೆಕ್ಕಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ದೇಶಾದ್ಯಂತ ಕೊರೋನಾ ವೈರಸ್ ಹಬ್ಬಿಸಿರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕರೆ ಕೊಟ್ಟ ಆರೋಪ ಎದುರಿಸುತ್ತಿರುವ ಟೆಕ್ಕಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ದೇಶಾದ್ಯಂತ ಕೊರೋನಾ ವೈರಸ್ ಹಬ್ಬಿಸಿರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕರೆ ಕೊಟ್ಟ ಆರೋಪ ಎದುರಿಸುತ್ತಿರುವ ಟೆಕ್ಕಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಸಾಫ್ಟ್ ವೇರ್ ಇಂಜಿನಿಯರ್ ಮೊಹಮ್ಮದ್ ಮುಜೀಬ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ. ಅರ್ಜಿದಾರರು ದೇಶ ವಿರೋಧಿ ಹಾಗೂ ಮತೀಯ ಭಾವನೆಗಳಿಗೆ ಒಳಗಾಗಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. 

ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಆರೋಪಿ, ಈ ಹಿಂದೆ ಬಹ್ರೇನ್ ಮತ್ತು ಕುವೈತ್ ದೇಶಗಳಲ್ಲಿ ವಾಸಿಸಿರುವುದು ಮತ್ತು ಪಾಕಿಸ್ತಾನದ ಕೆಲ ವಾಟ್ಸ್ ಆ್ಯಪ್ ನಂಬರ್ ಗಳಲ್ಲಿ ಸಕ್ರಿಯರಾಗಿರುವುದು ತನಿಖೆಯಿಂದ ಗೊತ್ತಾಗಿದೆ ಎಂದು ನ್ಯಾಯಪೀಠ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ. ಆರೋಪಿ ಧಾರ್ಮಿಕ ಮೂಲಭೂತ ಹಾಗೂ ದೇಶ ವಿರೋಧಿ
ಚಿಂತನೆ ಹೊಂದಿರುವುದು ತಿಳಿದುಬಂದಿದೆ. ಇವರ ಮುಜೀಬ್ ಸಂಪರ್ಕಗಳ ಕುರಿತು ಎನ್‌ಐಎ ತನಿಖೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಆರೋಪಿಗೆ ಜಾಮೀನು ನೀಡಲಾಗದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಆರೋಪವೇನು: ದೇಶಾದ್ಯಂತ ಕೊರೋನಾ ಸೋಂಕಿನ ಭೀತಿ ಹರಡುತ್ತಿದ್ದ ಸಂದರ್ಭದಲ್ಲಿ, ಈ ವ್ಯಕ್ತಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ, ಮನೆಯಿಂದ ಆಚೆಗೆ ಹೋಗಿ ಸಾರ್ವಜನಿಕ ಪ್ರದೇಶದಲ್ಲಿ ಉಗಿದು ಕೊರೊನಾ ವೈರಸ್ ಹರಡೋಣ. ವಿಶ್ವದ ಒಂದು ಮೂಲೆಯಿಂದ ಮತ್ತೊಂದು ಮೂಲೆಗೆ ಕೊರೊನಾ ಹರಡಿ. ನಾಯಿಗಳನ್ನು ಕೊಲ್ಲುವುದಕ್ಕೆ ನನ್ನ ಗನ್ ಸಿದ್ಧವಾಗಿದೆ' ಎಂದು ಪೋಸ್ಟ್ ಹಾಕಿದ್ದ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com