ಆಯುಷ್ ವೈದ್ಯರ ಬೇಡಿಕೆ ಈಡೇರಿಕೆಗೆ ಸರ್ಕಾರದ ಒಪ್ಪಿಗೆ- ಸಚಿವ ಶ್ರೀರಾಮುಲು

ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದ ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿಗಳ ಬೇಡಿಕೆ ಈಡೇರಿಸಲು ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಸಮ್ಮತಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಸಚಿವರು ವಿನಂತಿಸಿದ್ದಾರೆ.
ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು

ಬೆಂಗಳೂರು: ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದ ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿಗಳ ಬೇಡಿಕೆ ಈಡೇರಿಸಲು ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಸಮ್ಮತಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಸಚಿವರು ವಿನಂತಿಸಿದ್ದಾರೆ.

ವಿಧಾನ ಸೌಧದಲ್ಲಿ ಸಚಿವ ರಾಮುಲು ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳು ಮತ್ತು ಆಯುಷ್ ವೈದ್ಯರ ಸಭೆಯಲ್ಲಿ ಆಯುಷ್ ವೈದ್ಯರ 8 ಬೇಡಿಕೆಗಳ ಬಗ್ಗೆ ಸಮಗ್ರವಾಗಿ ಚೆರ್ಚೆ ನಡೆಸಲಾಗಿದೆ. ಅಲ್ಲದೆ ವೈದ್ಯರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯದ ಆರೋಗ್ಯ ಇಲಾಖೆ ಕಾರ್ಯಸೂಚಿ ಅಡಿಯಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅಲೋಪತಿ ಗುತ್ತಿಗೆ ವೈದರಿಗೆ ಯಾವ ಆಧಾರದ ಮೇಲೆ ವೇತನ ಹೆಚ್ಚಿಸಲಾಗಿದೆಯೋ ಅದೇ ಮಾನದಂಡದ ಆಧಾರದ ಮೇಲೆ ಆಯುಷ್ ವೈದ್ಯರಿಗೆ ಸಹ ವೇತನ ಹೆಚ್ಚಿಸಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ (NHM ) ರಾಷ್ಟ್ರೀಯ ಬಾಲ ಸ್ವಾಸ್ತ ಯೋಜನೆ (RBSK) ವೈದ್ಯರಿಗೆ ರಾಜ್ಯ ಸರ್ಕಾರ ವೇತನ ಹೆಚ್ಚಿಸುವ ಸಂಬಂಧ ಆರ್ಥಿಕ ಇಲಾಖೆಗೆ ತಕ್ಷಣ ಕಡತ ಸಲ್ಲಿಸಲು ಸೂಚಿಸಲಾಗಿದೆ.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯರಿಗೆ ವೇತನ ಹೆಚ್ಚಿಸಲು ಕೇಂದ್ರದ ಅನುಮತಿ ಪಡೆಯಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆಯುಷ್ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ  ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಸ್ಟೈಪಂಡ್ ಹೆಚ್ಚಿಸುವ ಸಲುವಾಗಿ ಆರ್ಥಿಕ ಇಲಾಖೆಗೆ ಕಡತ ಕಳಿಸಲು ತೀರ್ಮಾನಿಸಲಾಗಿದೆ ಎಂದರು.

ವಿಶೇಷ ನೇಮಕಾತಿ ವಿಭಾಗದಿಂದ ಈ ವರ್ಷ 2000 ಎಂಬಿಬಿಎಸ್ ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುವ ಮಾದರಿಯಲ್ಲಿ ಆಯುಷ್ ವೈದ್ಯರನ್ನು ಸಹ ನೇರ ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಶ್ರೀರಾಮುಲು ಭರವಸೆ ನೀಡಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಷ್ ವೈದ್ಯರು, ರಾಜ್ಯ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಸಚಿವರ ಭರವಸೆ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ಕೈಬಿಡುವ ಬಗ್ಗೆ ಚೆರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಜೊತೆಗೆ ಕೇಂದ್ರ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡುತ್ತಿದ್ದು ಅಷ್ಟರಲ್ಲಿ ನಮ್ಮ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು.ಇಲ್ಲದಿದ್ದಲ್ಲಿ ಮುಂದಿನ ಹೋರಾಟದ ಬಗ್ಗೆ ಚಿಂತಿಸಬೇಕಾಗುತ್ತದೆ ಎಂದು ಆಯುಷ್ ವೈದ್ಯರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com